ಮೋದಿ ವಿರುದ್ಧ ಬ್ಯಾನರ್ ಅಳವಡಿಸಿರುವುದು 
ರಾಜಕೀಯ

ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ಯುವ ಕಾಂಗ್ರೆಸ್ ವಿರುದ್ಧ BJP ದೂರು, FIR ದಾಖಲು

ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು.

ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದ ಮುಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಆಕ್ಷೇಪಾರ್ಹ ಬ್ಯಾನರ್ ಅಳವಡಿಸಿ, ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಅವರನ್ನೊಳಗೊಂಡ ನಿಯೋಗವು ದೂರು ನೀಡಿದೆ,

ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು ಎಂದು ಆರೋಪಿಸಿದ್ದಾರೆ.

ಫೆಬ್ರವರಿ 8ರ ಭಾನುವಾರದಂದು ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಮತ್ತು ವಿಧಾನಸೌಧದ ಮುಂಭಾಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.

ಬ್ಯಾನರ್‌ಗಳಲ್ಲಿ ಪ್ರಧಾನಿ ಮೋದಿ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿಷಯದಲ್ಲಿ “ಶರಣಾಗಿದ್ದಾರೆ” ಎಂದು ಆರೋಪಿಸಲಾಗಿತ್ತು. ಅಲ್ಲದೆ, ಸಂಸತ್ತಿಗೆ ಬರಲು ಧೈರ್ಯವಿಲ್ಲದ ಪ್ರಧಾನಿ ದೇಶವನ್ನು ಹೇಗೆ ರಕ್ಷಿಸುತ್ತಾರೆ? ಎಂಬ ವಿವಾದಾತ್ಮಕ ಬರಹಗಳಿದ್ದವು ಎಂದು ಬಿಜೆಪಿ ತನ್ನ ದೂರಿನಲ್ಲಿ ತಿಳಿಸಿದೆ.

ಪ್ರಧಾನಮಂತ್ರಿಗಳಿಗೆ ಅವಮಾನ ಮಾಡಿ ಸುಳ್ಳು ಸುದ್ದಿಯ ಬ್ಯಾನರ್‌ ಮೂಲಕ ತೇಜೋವಧೆ ಮಾಡಿ, ರಾಜ್ಯದಲ್ಲಿ ಆಶಾಂತಿ ಮತ್ತು ರಾಜಕೀಯ ದಂಗೆಗಳನ್ನು ಪ್ರಚೋದಿಸುತ್ತಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌‍ ಪಧಾದಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕಾಕೆಂದು ಒತ್ತಾಯಿಸಿದ್ದಾರೆ.

FIR ದಾಖಲು

ಈ ನಡುವೆ ದೂರು ಬೆನ್ನಲ್ಲೇ ಫ್ಲೇಕ್ಸ್ ಅಳವಡಿಸಿದವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಈ ಬಗ್ಗೆ ತನಿಖೆ ಆರಂಭಿಸಲಿರುವಂತ ವಿಧಾನಸೌಧ ಠಾಣೆಯ ಪೊಲೀಸರು, ಬ್ಯಾನರ್ ಅಳವಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗೊಳ್ಳುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾ ಪಟ್ಟಿ...

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು'; ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್

ಸತತ 2ನೇ ದಿನವೂ Indian Stock Market ಭಾರಿ ಏರಿಕೆ: Sensex 827 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50