ಸತೀಶ್ ಜಾರಕಿಹೊಳಿ  
ರಾಜಕೀಯ

ಎಷ್ಟು ಶಾಸಕರ ಬೆಂಬಲವಿದೆ ಎಂಬುದು ಮುಖ್ಯವಲ್ಲ; ಯಾರು ಸಮರ್ಥರೋ ಅವರಿಗೆ ಅವಕಾಶ: ಸತೀಶ್ ಜಾರಕಿಹೊಳಿ

80-90 ಶಾಸಕರ ಬೆಂಬಲ ಇವೆಲ್ಲ ಪ್ರಶ್ನೆ ಉದ್ಭವಿಸಲ್ಲ. ಯಾರು ಸಮರ್ಥರಿದ್ದಾರೆ, ಯಾರು ಮುಂದುವರಿಯುತ್ತಾರೋ ಅವರಿಗೆ ಅವಕಾಶ ಸಿಗುತ್ತದೆ. ಆದರೆ, ಆ ಸಂದರ್ಭ ಇನ್ನೂ ಬಂದಿಲ್ಲ, ಬಂದಾಗ ಚರ್ಚೆ ಮಾಡೋಣ ಎಂದರು.

ದಾವಣಗೆರೆ: 80 ಶಾಸಕರ ಬೆಂಬಲ ಎಂಬುದು ಪ್ರಶ್ನೆಯಲ್ಲ. ಸಮರ್ಥರಿಗೆ, ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಇರುವವರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಆದರೆ, ಅಂತಹ ಸಂದರ್ಭ ಇನ್ನೂ ಬಂದಿಲ್ಲ. ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು ಅಧಿಕಾರ ಹಂಚಿಕೆ ವಿಚಾರವಾಗಿ ನಿರ್ಮಾಣವಾದ ಗೊಂದಲ ಶೀಘ್ರ ಬಗೆಹರಿಯುವ ನಿರೀಕ್ಷೆ ಇತ್ತು. ಈ‌ ವಿಚಾರದಲ್ಲಿ ಏಕೆ ವಿಳಂಬವಾಗುತ್ತಿದೆ ಎಂಬುದು ಗೊತ್ತಿಲ್ಲ. ಈ‌ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ಕಾಯುವುದು ಅನಿವಾರ್ಯ. ಏಕೆ ತಡವಾಗುತ್ತಿದೆ ಎಂಬುದಕ್ಕೆ ಕಾರಣ ಗೊತ್ತಿಲ್ಲ. ಗೊಂದಲ ಬೇಗ ಬಗೆಹರಿಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ 80-90 ಶಾಸಕರ ಬೆಂಬಲವಿದ್ದು, ಅವರಿಗೆ ಸಿಎಂ ಆಗಲು ಅವಕಾಶ ನೀಡಿ ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ ಎಂಬ ರಾಮನಗರ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ ಹೇಳಿಕೆಗೆ ತಿರುಗೇಟು ನೀಡಿದರು.

80-90 ಶಾಸಕರ ಬೆಂಬಲ ಇವೆಲ್ಲ ಪ್ರಶ್ನೆ ಉದ್ಭವಿಸಲ್ಲ. ಯಾರು ಸಮರ್ಥರಿದ್ದಾರೆ, ಯಾರು ಮುಂದುವರಿಯುತ್ತಾರೋ ಅವರಿಗೆ ಅವಕಾಶ ಸಿಗುತ್ತದೆ. ಆದರೆ, ಆ ಸಂದರ್ಭ ಇನ್ನೂ ಬಂದಿಲ್ಲ, ಬಂದಾಗ ಚರ್ಚೆ ಮಾಡೋಣ ಎಂದರು.

ಅಧಿಕಾರ ಹಂಚಿಕೆ ಸಂಬಂಧದ ಗೊಂದಲ ಬಗೆಹರಿಸಬೇಕು ಎಂಬ ಶಾಸಕ ಬಸವರಾಜ ಶಿವಗಂಗಾ ಆಗ್ರಹ ಕುರಿತು ಪ್ರತಿಕ್ರಿಯಿಸಿ, ಸಿಎಂ ಕುರ್ಚಿ ಗೊಂದಲ ಯಾವಾಗ ಬಗೆಹರಿಯುತ್ತದೆ ಎಂದು ನಾನೂ ಕಾಯುತ್ತಿದ್ದೇನೆ. ಅಧಿಕಾರ ಹಂಚಿಕೆ ವಿಚಾರವಾಗಿ ನಿರ್ಮಾಣವಾದ ಗೊಂದಲ ಶೀಘ್ರ ಬಗೆಹರಿಯುವ ನಿರೀಕ್ಷೆ ಇತ್ತು. ಆದರೆ, ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು, ಅಲ್ಲಿಯವರೆಗೆ ಕಾಯಬೇಕು. ಆದರೆ, ಈ ವಿಷಯವಾಗಿ ಹೈಕಮಾಂಡ್‌ ಸ್ಪಷ್ಟ ನಿರ್ಧಾರ ಕೈಗೊಳ್ಳದೇ ಇರಲು ಕಾರಣ ಏನು ಎಂಬುದು ಗೊತ್ತಾಗುತ್ತಿಲ್ಲ ಎಂದರು.

ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ತುಂಬಾ ಜನ ಸೀನಿಯರ್‌ ಇದ್ದಾರೆ. ನಾವು ಆಗಬೇಕು ಅಂತಾ ಕಾಯುತ್ತಿದ್ದಾರೆ. ವರಿಷ್ಠರು ಹೇಳುವವರೆಗೂ ಕಾಯಬೇಕು ಎಂದರು. ಕಾಂಗ್ರೆಸ್ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಸಮರ್ಥರಿಗೆ, ಪಕ್ಷವನ್ನು ಮುನ್ನಡೆಸುವ ಶಕ್ತಿ ಇರುವವರಿಗೆ ಅವಕಾಶ ಸಿಗಲಿದೆ. ಸಚಿವ ಸಂಪುಟ ವಿಸ್ತರಣೆಗೆ ಕೂಡ ಹೈಕಮಾಂಡ್ ಒಪ್ಪಿಗೆ ಸಿಗಬೇಕಿದೆ.

ಗೊಂದಲಗಳು ಶೀಘ್ರ‌ ಬಗೆಹರಿದು ಪಕ್ಷವನ್ನು ಬಲಪಡಿಸುವ ಅಗತ್ಯವಿದೆ. ಸಿಎಂ ಪುತ್ರ ಯತೀಂದ್ರ ಅವರೇ ಹೈಕಮಾಂಡ್‌ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ವ್ಯವಸ್ಥೆಯಲ್ಲಿ ಶಿವಕುಮಾರ್‌ ಹೇಳಿದಂತೆಯೇ ಎಲ್ಲರೂ ಹೈಕಮಾಂಡೇ. ಎಲ್ಲರೂ ದೊಡ್ಡವರೇ. ಯಾರು ಸಣ್ಣವರು ಅಂತ ಹೇಳುವುದಕ್ಕೇ ಆಗುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ದೊಡ್ಡ ದಾಖಲೆ ನಿರ್ಮಿಸಿದ Virat Kohli

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!

SCROLL FOR NEXT