ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಅಧಿಕಾರ ಹಂಚಿಕೆ ಬಿಕ್ಕಟ್ಟು: ಸಿಎಂ ಜೊತೆಗಿನ ಬಜೆಟ್ ಪೂರ್ವಭಾವಿ ಸಭೆ ಬಿಟ್ಟು, ದೆಹಲಿಗೆ ಡಿಕೆಶಿ ಪ್ರಯಾಣ!

ಇಂದು ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಅವರಿಗೆ ಸಂಬಂಧಿಸಿದ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದಾರೆ.

ಇಂದು ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ ಅವರಿಗೆ ಸಂಬಂಧಿಸಿದ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಇಲಾಖೆಯಲ್ಲಿ ಕೆಲಸಗಳು ಉತ್ತಮವಾಗಿ ನಡೆಯುತ್ತಿವೆ. ಮುಖ್ಯಮಂತ್ರಿ ಜಲಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ನಮ್ಮಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಅವರೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲವೂ ಯೋಜನಾಬದ್ಧವಾಗಿರುವ ಕಾರಣ ಇಲಾಖೆಯಲ್ಲಿ ಹೆಚ್ಚಿನ ಕೆಲಸ ಏನೂ ಇಲ್ಲ ಎಂದರು.

ದೆಹಲಿ ಭೇಟಿ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಕೇಂದ್ರ ಸಚಿವರು, ಪಕ್ಷದ ಕಾನೂನು ತಂಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಕೇಂದ್ರ ಸಚಿವರು, ನಮ್ಮ ಕಾನೂನು ತಂಡ, ಕಾಂಗ್ರೆಸ್ ನಾಯಕರು ಮತ್ತು ನನಗೆ ಕರೆ ಮಾಡಿರುವ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು. ಆದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡ್ತೀರಾ ಎಂಬ ಪ್ರಶ್ನೆಗೆ ಅದೆಲ್ಲಾವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಮಾಧ್ಯಮದವರ ನಿರಂತರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಡಿಕೆ ಶಿವಕುಮಾರ್, "ನಿಮಗೆ ಯಾಕೆ ಇಷ್ಟೊಂದು ಕುತೂಹಲ? ನಾನೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ. ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 6ಕ್ಕೆ ಆರು ವರ್ಷ ಪೂರೈಸಲಿದ್ದೇನೆ. ನಮ್ಮ ವಿರೋಧ ಪಕ್ಷದ ನಾಯಕ, ಮುಖಂಡರು, ಸಂಸದರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಅವರನ್ನು ಭೇಟಿಯಾಗುತ್ತಲೇ ಇರುತ್ತೇನೆ, ನನ್ನ ಕಷ್ಟ-ನಲಿವುಗಳನ್ನು ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.

ತಮ್ಮ ಭೇಟಿಯ ಬಗ್ಗೆ ವಿವರಿಸಿದ ಶಿವಕುಮಾರ್ ಅವರು ದೆಹಲಿಯ ಇಂದಿರಾ ಭವನಕ್ಕೆ ಭೇಟಿ ನೀಡಲಿದ್ದು, ಕೆಲವು ನಾಯಕರನ್ನು ಭೇಟಿಯಾಗಲಿದ್ದೇನೆ. ಯಾರನ್ನು ಭೇಟಿ ಮಾಡುತ್ತೇನೆ ಎಂಬುದನ್ನು ಅವರೇ ಹೇಳ್ತಾರೆ ಎಂದು ವ್ಯಂಗ್ಯವಾಡಿದರು.

ಅಧಿಕಾರ ಹಸ್ತಾಂತರ ಕುರಿತು ದೆಹಲಿಯಲ್ಲಿ ಚರ್ಚೆಯಾಗಲಿದೆಯೇ ಎಂಬ ಪ್ರಶ್ನೆಗೆ ‘ನಾನು ರಾಜಕೀಯ ವ್ಯಕ್ತಿ’ ಎಂದಷ್ಟೇ ಹೇಳಿ ಅಲ್ಲಿಂದ ನಿರ್ಗಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್!

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್: ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!

ಯೋಗೇಶ್ ಗೌಡ ಕೊಲೆ ಕೇಸ್ ಶಿಕ್ಷೆ ಪ್ರಕಟಕ್ಕೂ ಮೊದಲೇ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!

ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

North to South, ಯಾವುದೇ ತಾರತಮ್ಯ, ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ ಗ್ಯಾರಂಟಿ!

SCROLL FOR NEXT