ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿ, ನಾಯಕತ್ವದ ವಿಚಾರದಲ್ಲಿ ಈ ಕ್ಷಣ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.
“ಈ ಕ್ಷಣಕ್ಕೆ ಯಾವುದೇ ವಿಷಯ ಚರ್ಚೆಗೆ ಒಳಪಟ್ಟಿಲ್ಲ,” ಎಂದು ಮಹಾದೇವಪ್ಪ ಅವರು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಕೇಳಿದಾಗ, ಅಂತಹ ಯಾವುದೇ ಚರ್ಚೆಯಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಗಬಹುದು ಎಂಬ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಮಹದೇವಪ್ಪ, ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. ಹೈಕಮಾಂಡ್ ಏನು ತೀರ್ಮಾನಿಸಿದರೂ ಅದನ್ನು ಅನುಸರಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಒಪ್ಪಿಕೊಂಡಿದ್ದಾರೆ ಎಂಬುದನ್ನೂ ಮಹದೇವಪ್ಪ ಹೇಳಿದರು.