ಯತೀಂದ್ರ-ಪ್ರತಾಪ್ ಸಿಂಹ 
ರಾಜಕೀಯ

ನಿಮ್ಮಂತೆ ಹಿಂಬಾಗಿಲಿನಿಂದ ಹೋಗಲ್ಲ; ಮೈಸೂರಿನಿಂದಲೇ ಗೆದ್ದು ನೇರವಾಗಿ ವಿಧಾನಸಭೆಗೆ ಬರ್ತೀನಿ: ಯತೀಂದ್ರಗೆ ಪ್ರತಾಪ್ ಸವಾಲು

ಸಿಎಂ ಸಿದ್ದರಾಮಯ್ಯ ಪುತ್ರ, ಪರಿಷತ್ ಸದಸ್ಯ ಡಾ. ಯತೀಂದ್ರ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಮಾಡೋಕೆ ಕೆಲಸ ಇಲ್ಲದವರ ಆರೋಪಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ತಿರುಗೇಟು ನೀಡಿರುವ ಪ್ರತಾಪ್ ಸಿಂಹ ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ? ಎಂದು ಕುಹಕವಾಡಿದ್ದಾರೆ.

ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ, ಪರಿಷತ್ ಸದಸ್ಯ ಡಾ. ಯತೀಂದ್ರ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಮಾಡೋಕೆ ಕೆಲಸ ಇಲ್ಲದವರ ಆರೋಪಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ತಿರುಗೇಟು ನೀಡಿರುವ ಪ್ರತಾಪ್ ಸಿಂಹ ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ? ಎಂದು ಕುಹಕವಾಡಿದ್ದಾರೆ.

ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಹಣ ಮಾಡೋದೇ ಕೆಲಸನಾ? ನಿಮ್ಮಂತಹ ಕೆಲಸವನ್ನು ನಾನು ಯಾವತ್ತೂ ಮಾಡಲ್ಲ. ವರ್ಗಾವಣೆ ದಂಧೆ ಕೆಲಸ ನಿಮಗೇ ಇರಲಿ. ನಿಮ್ಮ ಅಪ್ಪ ಸಹ ನಾಲ್ಕು ಬಾರಿ ಚುನಾವಣೆಯಲ್ಲಿ ಸೋತಿದ್ದರು. ಅವರನ್ನು ಕೆಲಸ ಇಲ್ಲದವರು ಅನ್ನುತ್ತಿದ್ರಾ? ನಂಗೆ ತಪ್ಪಿರೋದು ಟಿಕೆಟ್ ಅಷ್ಟೇ. ನನ್ನಂತೆ 130ಕ್ಕೂ ಹೆಚ್ಚು ಜನರಿಗೆ ಲೋಕಸಭೆ ಟಿಕೆಟ್ ತಪ್ಪಿತ್ತು. ನನ್ನ ಜೊತೆ ಸಂಸದರಾಗಿದ್ದ ಪರ್ವೇಶ್ ವರ್ಮಾ ಅವರು ದೆಹಲಿ ವಿಧಾನಸಭೆಯಿಂದ ಸ್ಪರ್ಧಿಸಿ ಗೆದ್ದು ಇಂದು ದೆಹಲಿ ಡಿಸಿಎಂ ಆಗಿದ್ದಾರೆ.

ನಾನು ವಿಧಾನಸಭೆಗೆ ಮೈಸೂರಿನಿಂದಲೇ ಗೆದ್ದು ಬರ್ತೀನಿ. ಅವತ್ತು ನೀವು ಎಲ್ಲಿ ಇರುತ್ತೀರಾ ನೋಡ್ತಿನಿ. ನಿಮ್ಮ ರೀತಿ ಹಿಂಬಾಗಿಲಿನಿಂದ ವಿಧಾನಸಭೆಗೆ ಬರುವ ಜಾಯಮಾನ ನನ್ನದಲ್ಲ ಎಂದು ಪ್ರತಾಪ್ ಸಿಂಹ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ