ಸತೀಶ್ ಜಾರಕಿಹೊಳಿ  
ರಾಜಕೀಯ

ನಾಯಕತ್ವ ಜಟಾಪಟಿ: ಶೀಘ್ರದಲ್ಲೇ ಹೈಮಾಂಡ್ ನಿರ್ಧಾರ; ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು, ಪಕ್ಷದೊಳಗಿನ ಗೊಂದಲವನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಲಾಗಿದೆ.

ಬೆಳಗಾವಿ: ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತಾರ್ಕಿಕ ತಲುಪಿದ್ದು, ಅಂತಿಮ ನಿರ್ಧಾರ ಶೀಘ್ರವೇ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಶನಿವಾರ ಹೇಳಿದ್ದಾರೆ..

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರೊಂದಿಗೆ ಜಾರಕಿಹೊಳಿಯವರು ಭೇಟಿ ಮಾಡಿದರು. ಭೇಟಿ ವೇಳೆ ಕರ್ನಾಟಕದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೋಳಿ ಅವರು, ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು, ಪಕ್ಷದೊಳಗಿನ ಗೊಂದಲವನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಲಾಗಿದೆ. “ಈ ವಿಷಯ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಖರ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಅಥವಾ ಪ್ರಮುಖ ಸಂಘಟನಾತ್ಮಕ ನಿರ್ಧಾರಗಳ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಬದಲಾವಣೆ ಅಥವಾ ಬೇರೆ ನಿರ್ಧಾರಗಳ ಕುರಿತು ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಬೇಕೆಂದು ನಾವು ಮನವಿ ಮಾಡಿದ್ದೇವೆ. ಚರ್ಚೆಗಳು ಸಕಾರಾತ್ಮಕವಾಗಿದ್ದು, ಪರಿಸ್ಥಿತಿ ಶೀಘ್ರ ಸ್ಥಿರಗೊಳ್ಳಬಹುದು ಎಂದು ಹೇಳಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ರಾಜಣ್ಣ, ಪಕ್ಷದ ಒಳಗಿನ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸಬೇಕು ಎಂಬ ಜಾರಕಿಹೋಳಿಯ ಅಭಿಪ್ರಾಯಕ್ಕೆ ಹಲವು ಶಾಸಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಗೊಂದಲ ಮುಗಿಸುವುದೇ ನಮ್ಮ ಮೊದಲ ಆದ್ಯತೆ. ಈ ವಿಷಯವನ್ನು ಒಟ್ಟಾಗಿ ನಾಯಕತ್ವಕ್ಕೆ ತಿಳಿಸಿದ್ದೇವೆ” ಎಂದು ಅವರು ಹೇಳಿದರು. ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದೂ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!

ಟ್ರಂಪ್ ಸುಂಕ ಕಾನೂನುಬಾಹಿರ: ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ..

ನನಗೂ ಚಿಂತೆಯಾಗಿದೆ: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಅಭಿಷೇಕ್ ಶರ್ಮಾ ಕುರಿತು ಸೂರ್ಯ ಸ್ಫೋಟಕ ಹೇಳಿಕೆ

40ನೇ ವಯಸ್ಸಿನಲ್ಲಿ ಶಿಖರ್ ಧವನ್ 2ನೇ ಮದುವೆ: ಗೆಳತಿ ಸೋಫಿ ಶೈನ್ ಜೊತೆ 'ಗಬ್ಬರ್' ಸಪ್ತಪದಿ, ಫೋಟೋ ವೈರಲ್!

ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ; ಇದರ ವಿಶೇಷತೆ ಏನು?

SCROLL FOR NEXT