ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಿಯಾಂಕ್ ಖರ್ಗೆ ಕುಟುಂಬದಲ್ಲಿ ನಿಜವಾದ ದಲಿತತ್ವ ಇದೆಯೇ? ಛಲವಾದಿ ನಾರಾಯಣ ಸ್ವಾಮಿ ಪ್ರಶ್ನೆ! Video

ಪ್ರಿಯಾಂಕ್ ಖರ್ಗೆ ಅವರದ್ದು ಕೇವಲ ಅಪ್ಪನ ನೆರಳಿನಲ್ಲಿ ಅಧಿಕಾರ ಅನುಭವಿಸುವ ಪಿತ್ರಾರ್ಜಿತ ರಾಜಕಾರಣ. ಆದರೆ ನನ್ನದು ಸ್ವಂತ ಬಲದಿಂದ ಬೆಳೆದುಬಂದ ಸ್ವಯಾರ್ಜಿತ ರಾಜಕಾರಣ ಎಂದು ಛಲವಾದಿ ನಾರಾಯಣ ಸ್ವಾಮಿ ತಿರುಗೇಟು ನೀಡಿದರು.

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದಲ್ಲಿ ನಿಜವಾದ ದಲಿತತ್ವ ಇದೆಯೇ? ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭಾನುವಾರ ಪ್ರಶ್ನಿಸಿದರು.

ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕೊಟ್ಟ ಕುದುರೆಯನ್ನು ಏರದವ ವೀರನೂ ಇಲ್ಲ. ಶೂರನೂ ಅಲ್ಲ. ಪ್ರಿಯಾಂಕ್ ಖರ್ಗೆ ಅವರದ್ದು ಕೇವಲ ಅಪ್ಪನ ನೆರಳಿನಲ್ಲಿ ಅಧಿಕಾರ ಅನುಭವಿಸುವ ಪಿತ್ರಾರ್ಜಿತ ರಾಜಕಾರಣ ಎಂದರು.

ಆದರೆ ನನ್ನದು ಸ್ವಂತ ಬಲದಿಂದ ಬೆಳೆದುಬಂದ ಸ್ವಯಾರ್ಜಿತ ರಾಜಕಾರಣ. ದಲಿತರ ಬಗ್ಗೆ ಮಾತನಾಡುವ ಇವರ ಕುಟುಂಬದಲ್ಲಿ ನಿಜವಾದ ದಲಿತತ್ವ ಇದೆಯೇ? ಸಣ್ಣ ಹಳ್ಳಿಯಿಂದ ಬಂದ ನಾನು ಇಂದು ಬಿಜೆಪಿಯಲ್ಲಿ ಈ ಮಟ್ಟಕ್ಕೆ ಬೆಳೆದಿರುವುದನ್ನು ಕಂಡು ಅವರಿಗೆ ಹೊಟ್ಟೆಯುರಿ ಶುರುವಾಗಿದೆ ಎಂದು ವಾಗ್ದಾಳಿ ನಡೆಸಿದರು.

ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ 39,000 ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್‌ನ ದಲಿತ ನಾಯಕರು ತುಟಿ ಬಿಚ್ಚುತ್ತಿಲ್ಲ! ಒಳಮೀಸಲಾತಿ ಜಾರಿಯಲ್ಲಿನ ನ್ಯೂನತೆಗಳಿಂದ ನಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಈ ಸರ್ಕಾರ ವಿಫಲವಾಗಿದೆ. ವಿಶ್ವವಿದ್ಯಾಲಯ, ಸಾರಿಗೆ ಇಲಾಖೆ, ಬಿಡಿಎ ಸೇರಿದಂತೆ ಎಲ್ಲೆಡೆ ನಮ್ಮ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

ನನ್ನ ಹೋರಾಟ ಸ್ವತಂತ್ರವಾದದ್ದು, ನನ್ನ ರಾಜೀನಾಮೆ ಕೇಳುವವರು ಮೊದಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಇತಿಹಾಸ ಮತ್ತು ಸತ್ಯಾಂಶಗಳನ್ನು ಸರಿಯಾಗಿ ಓದಿ, ಅರ್ಥಮಾಡಿಕೊಳ್ಳುವ ಯೋಗ್ಯತೆ ಬೆಳೆಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT