ಬಿ ವೈ ವಿಜಯೇಂದ್ರ  
ರಾಜಕೀಯ

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು "ದೂಷಣೆಯ ರಾಜಕೀಯ"ದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಔಷಧಿ ಕೊರತೆ, ದೊಡ್ಡ ಪ್ರಮಾಣದ ಅಕ್ರಮಗಳು ಮತ್ತು ಆರೋಗ್ಯ ಸೇವೆಗೆ ಅಡ್ಡಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಕಾಂಗ್ರೆಸ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು "ದೂಷಣೆಯ ರಾಜಕೀಯ"ದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ, ಆರೋಗ್ಯ ಇಲಾಖೆಯೇ ಐಸಿಯುನಲ್ಲಿದ್ದು, ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ತೀವ್ರ ಕೊರತೆ ಇದೆ. 108 ಆಂಬ್ಯುಲೆನ್ಸ್ ಸೇವೆಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ. ವೈದ್ಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಸಾಧನೆಯ ಸಮಾವೇಶಗಳೊಂದಿಗೆ ಅಧಿಕಾರಕ್ಕೆ ಬಂದು 1,000 ದಿನಗಳನ್ನು ಆಚರಿಸುತ್ತಿದೆ" ಎಂದು ವಾಗ್ದಾಳಿ ನಡೆಸಿದರು.

ಮೊದಲಿಗೆ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಸರಿ ಇಲ್ಲ. ಔಷಧಿಗಳು ಸಿಗುತ್ತಿಲ್ಲ. ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ಬೇಜಾಬ್ದಾರಿಯಿಂದ ಆರೋಗ್ಯ ಇಲಾಖೆ ನಷ್ಟದಲ್ಲಿದೆ. ಕೇಂದ್ರದ ಜನೌಷಧಿಯನ್ನು ಕೇಂದ್ರವನ್ನ ಮುಚ್ಚುವ ಕೆಲಸ ಮಾಡಿದರು. ಖಾಸಗಿ ಫಾರ್ಮಾಸಿಗಳಲ್ಲಿ ಔಷಧಿ ತೆಗೆದುಕೊಳ್ಳಿ ಎಂದು ಸರ್ಕಾರಿ ವೈದ್ಯರೇ ಹೇಳುತ್ತಿದ್ದಾರೆ.

ಸಿಟಿ ಸ್ಕ್ಯಾನ್‌, ಎಂಆರ್‌ಐ ಸ್ಕ್ಯಾನ್‌ ಸೇವೆಗಳಿಗೆ ಬಾಕೀ ಹಣ ಉಳಿಸಿಕೊಂಡಿದ್ದಾರೆ. ಇದರಿಂದ ಬಡ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಸಾಧನ ಸಮಾವೇಶ ಮಾಡುತ್ತಿದ್ದಾರೆ. ಆದರೆ ಜನರು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಗೊತ್ತಾ? ಎಂದು ಪ್ರಶ್ನೆ ಮಾಡಿದರು.

ನನ್ನ ಪ್ರಕಾರ ಕಾಂಗ್ರೆಸ್‌ ನುಡಿದಂತೆ ನಡೆಯುತ್ತಿರುವ ಸರ್ಕಾರ ಅಲ್ಲ. ಜನರಿಗಾಗಿ ಇರುವ ಸರ್ಕಾರ ಅಲ್ಲ. ದಲ್ಲಾಳಿಗಳಿಗಾಗಿ ಇರುವ ಸರ್ಕಾರ. ಔಷಧಿ ಕೊರತೆ ಉಂಟಾಗಲು ಸರ್ಕಾರ, ಸಚಿವರು ಕಾರಣ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಔಷಧಿ ಖರೀದಿಯಲ್ಲಿ ಅವ್ಯಾವಾಹರ ನಡೆಯುತ್ತಿದೆ. ಟೆಂಡರ್‌ ಕರೆದರೂ ಯಾರು ಭಾಗಿಯಾಗ್ತಿಲ್ಲ. ನಾನು ನೇರವಾಗಿ ಆರೋಪ ಮಾಡ್ತಿದ್ದೀನಿ. ಶೇ. 15-20 ರಷ್ಟು ಕಮಿಷನ್‌ ಹಾವಳಿಯಿಂದ ಟೆಂಡರ್‌ನಲ್ಲಿ ಯಾರು ಭಾಗಿಯಾಗುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

SCROLL FOR NEXT