ಎಚ್.ಡಿ ದೇವೇಗೌಡ 
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಗೆ ಸಿದ್ಧ: ಎಚ್.ಡಿ ದೇವೇಗೌಡ ಯೂಟರ್ನ್!

ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆಂದು ಕಾದುನೋಡಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ ಎಂದರು.

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಎನ್‍ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಉದ್ದೇಶವಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ.

ಬುಧವಾರ ಜೆ.ಪಿ. ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಪ್ರಾದೇಶಿಕ ಪಕ್ಷ. ಬಿಜೆಪಿ ರಾಷ್ಟ್ರೀಯ ಪಕ್ಷ. ಅವರು ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆಂದು ಕಾದುನೋಡಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ ಎಂದರು.

ಬಿಜೆಪಿಯವರು ಈ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇರೆಗೆ ನಾವು ಮುಂದಿನ ಹೆಜ್ಜೆ ಇರಿಸುತ್ತೇವೆ ಎನ್ನುವ ಮುಖಾಂತರ ನಾವು ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಿದ್ಧ ಎಂಬ ಸೂಚನೆ ನೀಡಿದರು. ಇತ್ತೀಚೆಗಷ್ಟೇ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಸ್ವಂತ ಶಕ್ತಿಯಿಂದ ಹೋರಾಡಲಿದೆ ಎಂದು ಗೌಡರು ಗುಡುಗಿದ್ದರು. ಇದೀಗ ಯೂ-ಟರ್ನ್‌ ಹೊಡೆದಿರುವ ಅವರು, ಜೆಡಿಎಸ್‌-ಬಿಜೆಪಿ ಮೈತ್ರಿ ಹೊಂದಾಣಿಕೆಯಲ್ಲಿ ಚುನಾವಣೆ ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರವು ಬೆಂಗಳೂರು ನಗರವನ್ನು ಐದು ನಗರ ಪಾಲಿಕೆ ಮಾಡಿ ವಿಂಗಡಿಸಿದೆ. ನಾವೇನು ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದ್ದೇವೆ. ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ನಾವು ಎನ್‌ಡಿಎ ಜೊತೆಗೇ ಹೋಗುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸೀಟು ಹಂಚಿಕೆ ಕೊಂಚ ಕಷ್ಟವಾಗಬಹುದು. ಪಕ್ಷದ ನಾಯಕರು, ಮುಖಂಡರು ಕುಳಿತು ಚರ್ಚಿಸುತ್ತೇವೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಚರ್ಚಿಸಿಕೊಂಡು ಇಲ್ಲಿಗೆ ಬರಬಹುದು. ಬಳಿಕ ನಾವೆಲ್ಲ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಿದ್ದೇವೆ ಎಂದು ದೇವೇಗೌಡರು ಹೇಳಿದರು.

ಇದೇ ಜೂನ್‌ಗೆ ನನ್ನ ರಾಜ್ಯಸಭಾ ಸದಸ್ಯತ್ವದ ಅವಧಿ ಮುಗಿಯಲಿದೆ. ಏಪ್ರಿಲ್‌ ಅಂತ್ಯಕ್ಕೆ ಅಧಿವೇಶನ ಮುಗಿಯಲಿದೆ. ಈ ಅಧಿವೇಶನದಲ್ಲಿ ಏನು ಪ್ರಸ್ತಾಪಿಸಬೇಕು ಎಂದು ಯೋಚಿಸುತ್ತಿದ್ದೇನೆ. ನಾನು ದೆಹಲಿಗೆ ಹೋಗುವ ಮುನ್ನ ನಿಮ್ಮನ್ನು ಭೇಟಿಯಾಗುವೆ. ರಾಜ್ಯಸಭಾ ಅವಧಿ ಮುಗಿದರೂ ನಿಮ್ಮನ್ನು ಭೇಟಿಯಾಗುವೆ. ಮುಂದಿನ ದಿನಗಳಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡುವ ಸನ್ನಿವೇಶ ಬರಲಿದೆ ಎಂದು ದೇವೇಗೌಡರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾ ಪಟ್ಟಿ...

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು'; ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್

ಸತತ 2ನೇ ದಿನವೂ Indian Stock Market ಭಾರಿ ಏರಿಕೆ: Sensex 827 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50