ಡಿ ಕೆ ಶಿವಕುಮಾರ್  
ರಾಜಕೀಯ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಮಾಗಡಿ ಕ್ಷೇತ್ರದ ಶಾಸಕ ಹೆಚ್ ​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲರೂ ಸೇರಿ ಸಭೆ ನಡೆಸಿದ್ದು, ಅದರಲ್ಲಿ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬಜೆಟ್ ಮಂಡನೆ ಸಂದರ್ಭದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ. ಹಲವು ನಾಯಕರುಗಳ ಬಹಿರಂಗ ಹೇಳಿಕೆಗಳ ಮಧ್ಯ ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹುಟ್ಟುಹಬ್ಬದ ನೆಪದಲ್ಲಿ ಸುಮಾರು 40 ಶಾಸಕರಿಂದ ಸಭೆ

ಮಾಗಡಿ ಕ್ಷೇತ್ರದ ಶಾಸಕ ಹೆಚ್ ​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲರೂ ಸೇರಿ ಸಭೆ ನಡೆಸಿದ್ದು, ಅದರಲ್ಲಿ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಬೆಂಬಲಿಗರು ಸುಮಾರು 60ಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದರು. ಅವರಲ್ಲಿ ಬರೋಬ್ಬರಿ 40 ಮಂದಿ ಶಾಸಕರು ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಸುಮಾರು 20 ಮಂದಿ ಶಾಸಕರು ಮದುವೆ, ವಿದೇಶ ಪ್ರವಾಸ ಸೇರಿದಂತೆ ವಿವಿಧ ಕಾರಣಗಳಿಂದ ಗೈರಾಗಿದ್ದಾರೆ ಎನ್ನಲಾಗಿದೆ. ಗೈರಾದ ಶಾಸಕರನ್ನು ಮುಂದಿನ ಸಭೆಗೆ ಸೇರಿಸಲು ಬೆಂಬಲಿಗರು ಯೋಜನೆ ರೂಪಿಸಲಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆಶಿಗೆ ಸಿಎಂ ಪಟ್ಟ ಕುರಿತು ಚರ್ಚೆ

ಔತಣಕೂಟ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತಂತೆ ಗಂಭೀರ ಚರ್ಚೆ ನಡೆದಿದ್ದು, ಹೈಕಮಾಂಡ್ ಇನ್ನು ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದೆ ಗಟ್ಟಿಯಾದ ಹೆಜ್ಜೆ ಇಡಬೇಕೆಂದು ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಗೊಂದಲಕ್ಕೆ ಅಂತಿಮ ತೆರೆ ಎಳೆಯಬೇಕು ಎಂದು ನಾಯಕರು ಹೇಳಿದ್ದಾರೆ ಎನ್ನಲಾಗುತ್ತಿದೆ.

ಹೈಕಮಾಂಡ್ ಮೇಲೆ ಒತ್ತಡ ತಂತ್ರ, ದೆಹಲಿ ಯಾತ್ರೆಗೆ ಚಿಂತನೆ

ಸಭೆಯಲ್ಲಿ ಮುಂದಿನ ರಾಜಕೀಯ ಹೆಜ್ಜೆಗಳ ಕುರಿತು ವಿಶ್ಲೇಷಣಾತ್ಮಕ ಚರ್ಚೆ ನಡೆದಿದ್ದು, ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಗಾರಿಕೆ ರೂಪಿಸಲಾಗಿದೆ. ದೆಹಲಿಯ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳಲೇಬೇಕು ಎಂದು ಶಾಸಕರು ಪಟ್ಟು ಹಿಡಿದಿದ್ದಾರೆ. ಡಿಕೆ ಶಿವಕುಮಾರ್ ಬೆಂಬಲಿಗರು ಶೀಘ್ರದಲ್ಲೇ ದೆಹಲಿ ಭೇಟಿ ಮಾಡುವ ಸಾಧ್ಯತೆ ಇದೆ. 70ಕ್ಕೂ ಹೆಚ್ಚು ಶಾಸಕರು ಒಟ್ಟಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನ ಕುರಿತ ನಿರ್ಧಾರಕ್ಕೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!