ಎಚ್ ಸಿ ಮಹದೇವಪ್ಪ 
ರಾಜಕೀಯ

ಸಿದ್ದರಾಮಯ್ಯ ಇಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್‌ ಉಳಿವು ಕಷ್ಟ; ಸಚಿವ ಹೆಚ್.ಸಿ ಮಹದೇವಪ್ಪ

ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನನಾ ಸಿಎಂ ಸಿಎಂ ಎಂದು ಸುಮ್ಮನೆ ಘೋಷಣೆ ಕೂಗ್ತಿರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೆ ಮುಂದಿನ ಸಿಎಂ ಸಿಎಂ ಘೋಷಣೆ ಕೂಗುತ್ತಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮತ್ತು ಅಹಿಂದ ವರ್ಗ ಮುಳುಗುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಹಿನ್ನಡೆ ಉಂಟಾದರೆ ಅದು ಕಾಂಗ್ರೆಸ್ ಮತ್ತು ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಸಮುದಾಯಗಳ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನನಾ ಸಿಎಂ ಸಿಎಂ ಎಂದು ಸುಮ್ಮನೆ ಘೋಷಣೆ ಕೂಗ್ತಿರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೆ ಮುಂದಿನ ಸಿಎಂ ಸಿಎಂ ಘೋಷಣೆ ಕೂಗುತ್ತಾರೆ. ದಲಿತ ಸಂಘಟನೆಯ ಮುಖಂಡರು ಬುದ್ಧಿವಂತರು. ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿ. ಅವರು ಬದಲಾಗುವುದಾದರೆ ದಲಿತರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆಂದು ತಿಳಿಸಿದರು.

2028 ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು. ಈ ಬಾರಿ ಸಿದ್ದರಾಮಯ್ಯ ತಮ್ಮ ಅವಧಿ ಪೂರೈಸಬೇಕು. ಮುಂದಿನ ಅವಧಿಗೂ ಸಿದ್ದರಾಮಯ್ಯ ಇರಬೇಕು ಎಂಬುದಕ್ಕೆ ನಮ್ಮ ತಕರಾರು ಇಲ್ಲ. ‘ಮತ್ತೆ ಮುಖ್ಯಮಂತ್ರಿ’ ಎಂಬ ನಾಟಕವನ್ನು ಸಿಎಂ ಸಿದ್ದರಾಮಯ್ಯರು ನೋಡಬೇಕು. ಮತ್ತೆ ಮುಖ್ಯಮಂತ್ರಿ ನಾಟಕದಲ್ಲಿ ಇಡೀ ರಾಜಕೀಯದ ಚಿತ್ರಣವೇ ಇದೆ. ಸಿದ್ದರಾಮಯ್ಯ ಯಾವತ್ತೂ ಹೊಗಳಿಕೆಗೆ ಬೆಲೆ ಕೊಟ್ಟವರಲ್ಲ. ಇದ್ದರೆ ಇರುತ್ತೆ, ಹೋದರೆ ಹೋಗುತ್ತೆ ಬಿಡಿ ಎನ್ನುವ ಮನಸ್ಥಿತಿ ಸಿದ್ದರಾಮಯ್ಯರದ್ದು. ಹಾಗಂತ ನಾವು ಅವರನ್ನು ಬಿಡುವುದಕ್ಕೆ ಬಿಡಬಾರದು. ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗುತ್ತದೆ. ಸಿದ್ದರಾಮಯ್ಯ ಮುಳುಗಿದರೆ ಅಹಿಂದ ವರ್ಗ ಮುಳುಗುತ್ತದೆ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ನಾಯಕತ್ವ ಗಟ್ಟಿ ಮಾಡಬೇಕು. ಕೆಲವರು ನಾಯಕತ್ವ ಅಲ್ಲಾಡಿಸಲು ಪ್ರಯತ್ನ ಪಡುತ್ತಾರೆ. ಅಧಿಕಾರ ಪಡೆಯುವರಿಗೆ ಹೋರಾಟ ಇರಬೇಕು. ವ್ಯಕ್ತಿತ್ವ ಇರಬೇಕು. ನೈತಿಕತೆ ಇರಬೇಕು. ಇಂತಹವರಿಗೆ ಅಧಿಕಾರ ಕೊಡಬೇಕು. ಯಾರ ಬಳಿ ಏನೋ ಇದೆ ಎಂದು ಅಧಿಕಾರ ಕೊಡಲು ಆಗಲ್ಲ. ಸಿದ್ದರಾಮಯ್ಯ ಮಾಸ್ ಲೀಡರ್. ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ. ಸಿದ್ದರಾಮಯ್ಯರದ್ದು ಟೈಗರ್ ಫೇಸ್. ಟೆಂಡರ್ ಹಾರ್ಟ್. ಇಷ್ಟು ವರ್ಷ ಒಂದು ದೂರು ಇಲ್ಲದೆ, ಕಪ್ಪು ಚುಕ್ಕೆ ಇಲ್ಲದೆ ಪರಿಶುದ್ಧ ರಾಜಕೀಯ ಜೀವನವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

SCROLL FOR NEXT