ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ  
ರಾಜಕೀಯ

ಸಿದ್ದರಾಮಯ್ಯ ಅವರ CM ಅವಧಿ ಗುತ್ತಿಗೆ ಆಧಾರದಲ್ಲಿದೆ: HDK ವ್ಯಂಗ್ಯ

ಕರ್ನಾಟಕದ ಅತಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಡಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಸಂಭ್ರಮಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಅಧಿಕಾರ ಗುತ್ತಿಗೆಗೆ ನೀಡಲಾಗಿದೆ.

ಬೆಂಗಳೂರು: ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅಧಿಕಾರಾವಧಿ 'ಗುತ್ತಿಗೆಗೆ' ನೀಡಲಾಗಿತ್ತು, ಈಗ ಪೂರ್ಣಾವಧಿಗೆ ವಿಸ್ತರಣೆಗಾಗಿ ಮುಖ್ಯಮಂತ್ರಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚೌಕಾಸಿ ಮಾಡುತ್ತಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಅತಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಡಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಸಂಭ್ರಮಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಅಧಿಕಾರ ಗುತ್ತಿಗೆಗೆ ನೀಡಲಾಗಿದೆ. ದೇವರಾಜ ಅರಸು ಅವರು ಆಡಳಿತದಲ್ಲಿ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರಿಗೇ ಸವಾಲು ಹಾಕಿದ್ದರು. ಆದರೆ ಸಿದ್ದರಾಮಯ್ಯ ಅವರು ಇಂದು ಹೈಕಮಾಂಡ್ ಮುಂದೆ ತಮ್ಮ ಪೂರ್ಣ ಅಧಿಕಾರ ಅವಧಿ ಮುಗಿಸಲು ಚೌಕಾಸಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT) ಮುಚ್ಚುವ ಸುದ್ದಿ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ, ಅದನ್ನು ಮುಚ್ಚಿಲ್ಲ, ಗಡಿಯಾರಗಳ ಉತ್ಪಾದನೆ ಇನ್ನೂ ನಡೆಯುತ್ತಿದೆ, ಅದು ಸಣ್ಣ ಪ್ರಮಾಣದಲ್ಲಿ ಮಾತ್ರ. ಹೆಚ್ ಎಂಟಿಯ ಹೂಡಿಕೆ ಹಿಂತೆಗೆತವನ್ನು 2016 ರ ಹಿಂದೆಯೇ ಘೋಷಿಸಲಾಗಿತ್ತು. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ ಎಂಟಿಯನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆಯ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ