ಡಿ.ಕೆ.ಶಿವಕುಮಾರ್ online desk
ರಾಜಕೀಯ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ ಶಿವಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಅವರು ಯಾವುದೇ ಮಾಧ್ಯಮ, ವೇದಿಕೆ, ಇಲ್ಲವೇ ಅಧಿವೇಶನದಲ್ಲಿ ಚರ್ಚಿಸುವುದಾದರೂ ನಾನು ಆ ಚರ್ಚೆಗೆ ಸಿದ್ಧ.

ಬೆಂಗಳೂರು: ಮನ್ರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಸವಾಲನ್ನು ನಾನು ಸ್ವೀಕರಿಸುತ್ತೇನೆ.ಅವರು ಯಾವಾಗ ಬೇಕಾದರೂ,ಯಾವುದೇ ವೇದಿಕೆಯಲ್ಲಾದರೂ ಚರ್ಚೆಗೆ ಬರಲಿ, ನಾನು ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಮನ್ರೇಗಾ ವಿಚಾರವಾಗಿ ಬಹಿರಂಗ ಚರ್ಚೆಯ ವಿಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ. ಮೊದಲು ‘ಡೈಲಾಗ್‌ ವೀರ ಕುಮಾರಸ್ವಾಮಿ’ ಅವರು ಬಂದರೆ ಒಳ್ಳೆಯದು ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರು ನರೇಗಾ ವಿಚಾರವಾಗಿ ಚರ್ಚೆಗೆ ಸಿದ್ಧ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಅವರು ಯಾವುದೇ ಮಾಧ್ಯಮ, ವೇದಿಕೆ, ಇಲ್ಲವೇ ಅಧಿವೇಶನದಲ್ಲಿ ಚರ್ಚಿಸುವುದಾದರೂ ನಾನು ಆ ಚರ್ಚೆಗೆ ಸಿದ್ಧ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಚರ್ಚೆಗೆ ಸಿದ್ಧ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅವರನ್ನೂ ಸ್ವಾಗತಿಸುತ್ತೇನೆ. ಮೊದಲು ಅವರೇ ಬಂದರೆ ಬಹಳ ಒಳ್ಳೆಯದು ಎಂದರು.

ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇಂದು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ. ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂ.1 ಎಂದು ಬಿಜೆಪಿಯ ಕೇಂದ್ರ ಸರ್ಕಾರವೇ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ, ಇಲ್ಲವೋ?. ನಮ್ಮ ತಾಲೂಕಿನಲ್ಲಿ ಅವ್ಯವಹಾರ ಆಗಿದೆಯೇ, ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ‘ಲೀಸ್ಡ್ ಸಿಎಂ’ ಎಂದು ಟೀಕಿಸಿರುವ ಕುರಿತು ಪ್ರತಿಕ್ರಿಯಿಸಿ, ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ ಎಂದರು.

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೇಳಿದಾಗ, "ರಾಜ್ಯ ರಾಜಕಾರಣ ಮಾತ್ರ ಯಾಕೆ ಹಳ್ಳಿಯಿಂದಲೇ ರಾಜಕಾರಣ ಮಾಡಲಿ" ಎಂದು ತಿಳಿದರು.

ಒಕ್ಕಲಿಗ ಉದ್ಯಮಿ ಕಾರ್ಯಕ್ರಮದ ಬಗ್ಗೆ ಕೇಳಿದಾಗ, "ಯುವ ಒಕ್ಕಲಿಗ ಉದ್ಯಮಿಗಳನ್ನು ಸೇರಿಸಿ ಉತ್ತೇಜನ ನೀಡಲಾಗುತ್ತಿದೆ. ಇಲ್ಲಿ ಉದ್ಯಮಿಗಳು ಪರಸ್ಪರ ಸೇರಿದ್ದಾರೆ. ನಾನು ಇಲ್ಲಿರುವ ಉದ್ಯಮಿಗಳ ಬಗ್ಗೆ ಮಾಹಿತಿ ಪಡೆದೆ.ಅವರು ಬಹಳ ಶ್ರಮ ಪಡುತ್ತಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video