ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ; ಭಾರೀ ಕುತೂಹಲ; Video

ನಾವೆಲ್ಲಾ ರಾಜಕಾರಣಿಗಳು, ನಮ್ಮ ಅನುಕೂಲಕ್ಕೆ ತಕ್ಕಂತೆ ಯಾರನ್ನು ಯಾವಾಗ ಭೇಟಿ ಮಾಡಬೇಕು ಎಂಬುದನ್ನು ನಿರ್ಧರಿಸಿ ಭೇಟಿ ಮಾಡುತ್ತೇವೆ. ಎಲ್ಲರೂ ಅದನ್ನೇ ಮಾಡುತ್ತಾರೆ. ಅದರಲ್ಲಿ ತಪ್ಪೇನೂ ಇಲ್ಲ. ದೆಹಲಿಗೆ ಬರುವಾಗಲೂ ನಾವೆಲ್ಲ ಸರ್ಕಾರದ ಕೆಲಸ, ಪಕ್ಷದ ಹಾಗೂ ರಾಜಕೀಯಕ್ಕಾಗಿಯೇ ಬರುತ್ತೇವೆ.

ಬೆಂಗಳೂರು/ನವದೆಹಲಿ: ನಾವೆಲ್ಲಾ ರಾಜಕಾರಣಿಗಳು, ಖಂಡಿತವಾಗಿಯೂ ರಾಜಕೀಯ ಮಾಡಿಯೇ ಮಾಡುತ್ತೇವೆ. ನಮ್ಮ ಅನುಕೂಲಕ್ಕೆ ಯಾವಾಗ, ಯಾರನ್ನು ಬೇಟಿ ಮಾಡಬೇಕೋ ಮಾಡುತ್ತೇವೆ. ಈ ಭೇಟಿ ಮಾಹಿತಿಯನ್ನು ನಾನು ಬಹಿರಂಗಪಡಿಸುವುದಿಲ್ಲ. ಪ್ರತಿಯೊಂದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾರ್ಮಿಕವಾಗಿ ನುಡಿದಿದ್ದು, ಈ ಹೇಳಿಕೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಭಾನುವಾರ ದೆಹಲಿಯಲ್ಲಿ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ನಾನು ಬಹಿರಂಗಪಡಿಸಲ್ಲ. ನಾನೇಕೆ ಅದನ್ನೆಲ್ಲ ಬಹಿರಂಗಪಡಿಸಲಿ? ಕಾಲವೇ ಉತ್ತರ ನೀಡುತ್ತದೆ. ಒಂದು ಮಾತಿನಲ್ಲಿ ಹೇಳುವುದಾದರೆ, ಕಾಲ ಎಲ್ಲದಕ್ಕೂ ತನ್ನ ಉತ್ತರ ನೀಡಲಿದೆ' ಎಂದು ಹೇಳಿದರು.

ನಾವೆಲ್ಲಾ ರಾಜಕಾರಣಿಗಳು, ನಮ್ಮ ಅನುಕೂಲಕ್ಕೆ ತಕ್ಕಂತೆ ಯಾರನ್ನು ಯಾವಾಗ ಭೇಟಿ ಮಾಡಬೇಕು ಎಂಬುದನ್ನು ನಿರ್ಧರಿಸಿ ಭೇಟಿ ಮಾಡುತ್ತೇವೆ. ಎಲ್ಲರೂ ಅದನ್ನೇ ಮಾಡುತ್ತಾರೆ. ಅದರಲ್ಲಿ ತಪ್ಪೇನೂ ಇಲ್ಲ. ದೆಹಲಿಗೆ ಬರುವಾಗಲೂ ನಾವೆಲ್ಲ ಸರ್ಕಾರದ ಕೆಲಸ, ಪಕ್ಷದ ಹಾಗೂ ರಾಜಕೀಯಕ್ಕಾಗಿಯೇ ಬರುತ್ತೇವೆ. ನೀವು ಯಾಕೆ ಅದನ್ನು ದೊಡ್ಡದು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಏತನ್ಮಧ್ಯೆ ಡಿ.ಕೆ.ಶಿವಕುಮಾರ್ ಅವರು 23.18 ರಂದು ಭಾನುವಾರ ನಿಗದಿಯಾಗಿದ್ದ ಸ್ವಿಜರ್‌ಲೆಂಡ್ ದಾವೋಸ್ ಪ್ರವಾಸ ರದ್ದುಪಡಿಸಿ, ಭಾನುವಾರ ದೆಹಲಿಗೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಮನ್ರೇಗಾ ಪರ ಪಿಸಿಸಿ ಅಧ್ಯಕ್ಷರ ಸಭೆಯಲ್ಲೂ ಶಿವಕುಮಾರ್ ಅವರು ವರ್ಚುಯಲ್ ಆಗಿ ಭಾಗವಹಿಸಿದ್ದರು. ಇದನ್ನು ಹೊರತುಪಡಿಸಿ ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದರು ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಶುಕ್ರವಾರ ಬೆಳಗ್ಗೆ ದೆಹಲಿಗೆ ತೆರಳಿದ್ದ ಡಿ. ಕೆ.ಶಿವಕುಮಾರ್‌ ಅವರು ಸಂಜೆ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಅಸ್ಸಾಂ ವೀಕ್ಷಕರ ಸಭೆಯಲ್ಲಿ ಭಾಗವಹಿಸಿದ್ದರು.

ಶನಿವಾರ ರಾಹುಲ್‌ಗಾಂಧಿ ಭೇಟಿ ಮಾಡಿ ಸಂಜೆ 5 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗಲು ನಿರ್ಧರಿಸಿದ್ದರು. ಆದರೆ, ಹಿರಿಯ ಮುಖಂಡ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನ ಹಿನ್ನೆಲೆಯಲ್ಲಿ ಶನಿವಾರ ಬೀದರ್‌ಗೆ ಆಗಮಿಸಿ, ಮತ್ತೆ ದೆಹಲಿಗೆ ಮರಳಿದ್ದರು. ಹೀಗಾಗಿ ಚರ್ಚೆ ಹಾಗೂ ಊಹಾಪೋಹಗಳು ಶುರುವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

ಕಚೇರಿಯಲ್ಲೇ ರಾಮಚಂದ್ರರಾವ್ ಮಹಿಳೆ ಜೊತೆ ರಾಸಲೀಲೆ: ಆರೋಪ ಅಲ್ಲಗಳೆದ DGP, Video Viral

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ RFO ಶವ ಪತ್ತೆ!

SCROLL FOR NEXT