ಪ್ರಿಯಾಂಕ್ ಖರ್ಗೆ 
ರಾಜಕೀಯ

ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ! ಪ್ರಿಯಾಂಕ್ ಖರ್ಗೆ ಕಿಡಿ

ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಧೀರ್ಘ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ಮಾಜಿ ಶಾಸಕರೊಬ್ಬರು ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ .ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ ನೀಡುವುದು ಸಮಯ ವ್ಯರ್ಥವೇ ಸರಿ, ಆದರೆ ಸಚಿವನಾಗಿ ಕುತರ್ಕಗಳಿಗೂ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ. ಗುಡ್ಡ ಅಗೆಯುವವರಿಗೆ ಇಲಿಯನ್ನಾದರೂ ಹಿಡಿಯುವ ಗುರಿ ಇರಬೇಕು, ಇವರಿಗೆ ಜಿರಳೆ ಹಿಡಿಯಲೂ ಸಾಧ್ಯವಾಗಲಿಲ್ಲ ಎಂದು ಟಾಂಗ್ ನೀಡಿದ್ದಾರೆ.

15ನೇ ಹಣಕಾಸು ಆಯೋಗದ ಅನುದಾನದಲ್ಲಿ ಶೇ. 90 ರಷ್ಟು ಜನಸಂಖ್ಯೆ ಮತ್ತು ಶೇ. 10 ರಷ್ಟು ಭೌಗೋಳಿಕ ಆಧಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸುತ್ತೋಲೆ ಹಾಗೂ ಮಾರ್ಗಸೂಚಿಗಳ ಅನ್ವಯ ಬಿಡುಗಡೆ ಮಾಡಲಾಗುತ್ತದೆ. ಒಟ್ಟು ಅನುದಾನದಲ್ಲಿ ಶೇ.60 ನಿರ್ಬಂಧಿತ, ಶೇ.40 ರಷ್ಟು ಅನಿರ್ಬಂಧಿತ ಅನುದಾನವಾಗಿ ಬಿಡುಗಡೆ ಮಾಡಲಾಗುತ್ತದೆ. ಈ ಅನುದಾನವನ್ನು ಗ್ರಾಮ ಪಂಚಾಯತಿಗಳು ಮಾರ್ಗಸೂಚಿ ಅನ್ವಯ ಗ್ರಾಮ ಸಭೆ ನಡೆಸಿ, ಕ್ರಿಯಾ ಯೋಜನೆ ತಯಾರಿಸಿಕೊಂಡು, ಗ್ರಾಮ ಪಂಚಾಯತಿಗಳ ಹಂತದಲ್ಲೇ ಕಾಮಗಾರಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ರಿಯಾಯೋಜನೆ ಮತ್ತು ಅನುಷ್ಠಾನದ ಮಾಹಿತಿಯನ್ನು ಇ- ಗ್ರಾಮ್ ಸ್ವರಾಜ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆಯೇ ಹೊರತು ಸರ್ಕಾರದಿಂದ ಅನುಮೋದನೆ ಪಡೆಯುವ ಅವಶ್ಯಕತೆ ಇರುವುದಿಲ್ಲ, ಸಂವಿಧಾನದ 73, 74 ತಿದ್ದುಪಡಿಯ ಮೂಲ ಆಶಯದಂತೆ ಸ್ಥಳೀಯವಾಗಿಯೇ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ