ಜೆಡಿಎಸ್ ಪೋಸ್ಟ್ 
ರಾಜಕೀಯ

ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ?: ಗೃಹ ಜ್ಯೋತಿ ಮರು ಪರಿಶೀಲನೆಗೆ ಜೆಡಿಎಸ್​​ ಕಿಡಿ

ಈ ಕುರಿತು ಎಕ್ಸ್​ ನಲ್ಲಿ​ ಪೋಸ್ಟ್​​ ಮಾಡಿರುವ ಜೆಡಿಎಸ್​​, ರಾಜ್ಯ ಸರ್ಕಾರದ ಈ ಕ್ರಮವನ್ನು 'ಗ್ಯಾರಂಟಿ ಮೋಸ' ಎಂದು ಟೀಕಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಮರು ಪರಿಶೀಲನೆಗೆ ಪ್ರತಿಪಕ್ಷ ಜೆಡಿಎಸ್​​ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದೆ.

ಈ ಕುರಿತು ಎಕ್ಸ್​ ನಲ್ಲಿ​ ಪೋಸ್ಟ್​​ ಮಾಡಿರುವ ಜೆಡಿಎಸ್​​, ರಾಜ್ಯ ಸರ್ಕಾರದ ಈ ಕ್ರಮವನ್ನು 'ಗ್ಯಾರಂಟಿ ಮೋಸ' ಎಂದು ಟೀಕಿಸಿದೆ.

ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು ಗಂಭೀರ ಆರೋಪ ಮಾಡಿದೆ.

ಎಸ್ಕಾಂ ಅಧಿಕಾರಿಗಳು ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ವಿವಿಧ ದಾಖಲೆಗಳನ್ನು ಕೇಳಿ ಜನರನ್ನು ಆತಂಕಕ್ಕೆ ದೂಡಲಾಗುತ್ತಿದೆ. ದಾಖಲೆಗಳ ಹೆಸರಿನಲ್ಲಿ ಜನರನ್ನು ಅನಗತ್ಯವಾಗಿ ಅಲೆದಾಡಿಸಲಾಗುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಉಚಿತ ವಿದ್ಯುತ್ ಪಡೆಯಲು ಪಾನ್ ಕಾರ್ಡ್ ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಸಾಕಾಗುವುದಿಲ್ಲವೇ ಎಂದು ಜೆಡಿಎಸ್, ಸರ್ಕಾರಕ್ಕೆ ಪ್ರಶ್ನಿಸಿದೆ.

ನಿಮ್ಮ ಉದ್ದೇಶ ಸ್ಪಷ್ಟವಾಗಿದೆ: ಕಳ್ಳ ಮಾರ್ಗದಲ್ಲಿ ಷರತ್ತುಗಳನ್ನು ವಿಧಿಸಿ, ಫಲಾನುಭವಿಗಳ ಸಂಖ್ಯೆ ಕಡಿತಗೊಳಿಸಿ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ನಾಮ ಹಾಕುವುದು!

ಬಡವರು, ರೈತರು ಮತ್ತು ಮಧ್ಯಮ ವರ್ಗದವರನ್ನು ದಿನಕ್ಕೊಂದು ದಾಖಲೆ ಕೇಳಿ ಕಚೇರಿಗಳಿಗೆ ಅಲೆದಾಡಿಸಿ, ಸತಾಯಿಸಿ, ಸೌಲಭ್ಯಗಳಿಂದ ವಂಚಿಸುವುದೇ ನಿಮ್ಮ ಸಾಧನೆಯೇ? ಕಾಂಗ್ರೆಸ್‌ ದುರಾಡಳಿತದಲ್ಲಿ ಕನ್ನಡಿಗರಿಗೆ ದಿನವೂ ಸಂಕಟ ಎಂದು ಕಿಡಿ ಕಾರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್‌ಗೆ ಪತ್ರ; ಇಲ್ಲಿದೆ ಕಾರಣ...

'ಸಿಂಧು ಜಲ ಒಪ್ಪಂದ ರದ್ದಾದರೆ ಜಾಗತಿಕ ವ್ಯವಸ್ಥೆಯೇ ಕುಸಿಯಲಿದೆ': 'ದಯಮಾಡಿ ನೆರವು ನೀಡಿ' ಜಗತ್ತಿಗೆ ಪಾಕಿಸ್ತಾನ ಮನವಿ

29 ವರ್ಷಗಳ ನಂತರ ‘ಅಮೆರಿಕಾ ಅಮೆರಿಕಾ 2’ ಚಿತ್ರ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್; ನಾಯಕ, ನಾಯಕಿ ಯಾರೂ?

‘ಸಿಯಾ ಸಿಗ್ನಲ್ ಕೊಟ್ಟಳು, ಇಬ್ಬರೂ ಸೇರಿ ಕೇತನ್‌ನನ್ನು ತಳ್ಳಿದೆವು’: ಲೋಹಗಢ ಕೋಟೆಯಲ್ಲಿ ಕೊಲೆ ದೃಶ್ಯ ಮರುಸೃಷ್ಟಿ ವೇಳೆ ಆರೋಪಿ ಪ್ರಿಯಕರ ಚೇತನ್!

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video