ಸಿಟಿ ರವಿ ಸುದ್ದಿಗೋಷ್ಠಿ 
ರಾಜಕೀಯ

ಗೃಹಲಕ್ಷ್ಮಿ ಯೋಜನೆ ಅಕ್ರಮಗಳ ತನಿಖೆಗೆ SIT ರಚಿಸಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ

ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬುಧವಾರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿ ನಕಲಿ ಬ್ಯಾಂಕ್ ಖಾತೆಗಳಿಗೆ ಹಾಗೂ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಜಮೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವನ್ನು ಲೆಕ್ಕಪರಿಶೋಧಕ ಮತ್ತು ಮಹಾಲೆಕ್ಕಪಾಲಕರ (CAG) ವರದಿಯಲ್ಲೂ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 5,000 ಕೋಟಿ ರೂ. ಮೊತ್ತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿಲ್ಲ ಎಂದು ಆರೋಪಿಸಿದ ರವಿ, ಈ ಹಣ ದುರುಪಯೋಗ ಅಥವಾ ಅಕ್ರಮವಾಗಿ ವರ್ಗಾವಣೆಯಾಗಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

"ಫಲಾನುಭವಿಗಳ ಖಾತೆಗೆ ಜಮೆಯಾಗಬೇಕಿದ್ದ ಹಣವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿದೆಯೇ? ಈ ಪ್ರಕರಣದಲ್ಲಿ ಇದುವರೆಗೆ ಏಕೆ ಎಫ್‌ಐಆರ್ ದಾಖಲಿಸಿಲ್ಲ?" ಎಂದು ಪ್ರಶ್ನಿಸಿದರು.

ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ಇದೇ ವೇಳೆ, ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ವಿವಿಧ ಷರತ್ತುಗಳನ್ನು ವಿಧಿಸುತ್ತಿರುವ ಕ್ರಮವನ್ನೂ ಸಿ.ಟಿ. ರವಿ ಖಂಡಿಸಿದರು. ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'