ವಿ ಸೋಮಣ್ಣ  
ರಾಜಕೀಯ

ವಿಜಯೇಂದ್ರ ಬದಲಾವಣೆಗೆ ವಿರೋಧಿ ಬಣ ಪಟ್ಟು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವರ ಹೆಸರು; ನಿತಿನ್ ನಬಿನ್ ಭೇಟಿಯಾದ ಸೋಮಣ್ಣ!

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಕೇಂದ್ರ ಸಚಿವ ಸೋಮಣ್ಣ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಬೆಂಗಳೂರು: ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಆರಂಭದಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದೆ.

ಈ ನಡುವೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್​ ಸಂದೇಶಕ್ಕೆ ಬದ್ಧ. ಅಮಿತ್ ಶಾ ವರುಣದಲ್ಲಿ ಸ್ಪರ್ಧಿಸು ಎಂದಿದ್ದಕ್ಕೆ ಅಲ್ಲಿ ಸ್ಪರ್ಧಿಸಿದ್ದೆ. ತುಮಕೂರಿನಲ್ಲಿ ಸ್ಪರ್ಧೆ ಮಾಡು ಎಂದರು, ಅಲ್ಲಿ ಸ್ಪರ್ಧಿಸಿ ಗೆದ್ದೆ ಎಂದರು.

ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾನು ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ದ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಹುದ್ದೆಗಳ ಬದಲಾವಣೆ ನಂತರ ಬಿಜೆಪಿಯಲ್ಲಿಯೂ ಸಹ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಕೇಂದ್ರ ಸಚಿವ ಸೋಮಣ್ಣ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಈ ಸಂಬಂಧ ರಾಜ್ಯ ಸಚಿವ ಸೋಮಣ್ಣ ಅವರು ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯ ಸಚಿವ ಸೋಮಣ್ಣ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ವಿಜಯೇಂದ್ರ ಅವರನ್ನು ಬದಲಿಸಲು ಅವರೇ ಸರಿಯಾದ ಅಭ್ಯರ್ಥಿ ಎಂದು ಬಿಜೆಪಿ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ