ಶೋಭಾ ಕರಂದ್ಲಾಜೆ 
ರಾಜಕೀಯ

ಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು; ವಿಡಿಯೋ ರಿಲೀಸ್‌

ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಮಸೀದಿ ಮತ್ತು ಸಮುದಾಯ ಭವನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಯುತ್ತಿದ್ದು, 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸರ್ಕಾರ ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ, ಮುಖ್ಯಮಂತ್ರಿಗಳೇ ನಿಮ್ಮ ಮೂಗಿನ ನೇರದಲ್ಲೇ ಅಧಿಕಾರಿಗಳು ಅಕ್ರಮವಾಗಿ ಮತದಾರರನ್ನು ಪಟ್ಟಿಗೆ ಸೇರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಬಾಂಗ್ಲಾದೇಶಿಯರನ್ನು ಓಡಿಸಿದ ಮೇಲೆ ಅವರೆಲ್ಲಾ ಈಗ ಕರ್ನಾಟಕಕ್ಕೆ ವಲಸೆ ಬಂದಿದ್ದಾರೆ. ಈಗ ಕರ್ನಾಟಕದಲ್ಲಿ ಆಶ್ರಯ ಪಡೆದಿರುವ ಅಕ್ರಮ ಬಾಂಗ್ಲಾದೇಶದ ಮತದಾರರನ್ನು ಸಕ್ರಮ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಹಲವು ಕಡೆ ಅಕ್ರಮವಾಗಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯ ವಿಡಿಯೋಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಕಳೆದ ಏಳೆಂಟು ವರ್ಷಗಳಿಂದಲೂ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಕಲಬುರ್ಗಿಯಲ್ಲಿ ಇದೇ ಅಕ್ರಮ ಕೆಲಸವನ್ನು ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು.

ಈ ಅಕ್ರಮ ವಲಸಿಗರಿಗೆ ಯಾವುದೇ ಸೂಕ್ತ ದಾಖಲೆಗಳಿಲ್ಲದಿದ್ದರೂ, ಸೈಬರ್ ಕೇಂದ್ರಗಳ ಮೂಲಕ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಇವರಿಗೆ ಶಾಶ್ವತ ವಾಸದ ಪ್ರಮಾಣ ಪತ್ರ ನೀಡಲು ಸ್ವತಃ ಸಿಎಂ ತೀರ್ಮಾನಿಸಿದ್ದಾರೆ. ಇದೆಲ್ಲವೂ 2028ರ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ನಡೆಸುತ್ತಿರುವ ಸಂಚು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿ ಮೌಖಿಕ ಆದೇಶ

ರಾಜ್ಯ ಸರ್ಕಾರದ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಹಾಗೂ ಬಿಎಲ್‌ಒಗಳು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳನ್ನು ಮಸೀದಿಗಳು, ಶಾದಿ ಮಹಲ್‌ಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ಕೂಡಿ ಹಾಕಿ ಸಾಮೂಹಿಕವಾಗಿ ಗಣತಿ ನಮೂನೆ ಅರ್ಜಿಗಳನ್ನು ಕೊಡಿಸಲಾಗುತ್ತಿದೆ ಎಂದರು.

ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ

ಜಿಬಿಎ ವ್ಯಾಪ್ತಿಯ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!

Good News: ಪತ್ನಿಯ ಮೊಣಕಾಲು ನೋವಿಗೆ ಪರಿಹಾರ, ಮನೆಯಲ್ಲೇ ಎಸ್ಕಲೇಟರ್ ನಿರ್ಮಿಸಿದ ಆಂಧ್ರಪ್ರದೇಶದ ಮೆಕಾನಿಕ್ ರೈತ, Video

ರಾಮ ಮಂದಿರ ದೇಣಿಗೆ ಲೂಟಿ: ಜುಲೈ 5 ರಿಂದ ಮಹಾರಾಷ್ಟ್ರದಲ್ಲಿ 'ರಾಮ ರಕ್ಷಾ' ಪ್ರತಿಭಟನೆ ಘೋಷಿಸಿದ ಉದ್ಧವ್!