ಬಿ ವೈ ವಿಜಯೇಂದ್ರ  
ರಾಜಕೀಯ

ರಾಜ್ಯದಲ್ಲಿ SIR ಜಟಾಪಟಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು; ಸರ್ಕಾರದ ವಿರುದ್ದ ಗಂಭೀರ ಆರೋಪ

ಆಡಳಿತಾರೂಢ ಕಾಂಗ್ರೆಸ್, ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳನ್ನು(ಬಿಎಲ್‌ಒ) ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಈ ಸಂಬಂಧ ಕೇಶರಿ ಪಕ್ಷ ಶನಿವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಆಡಳಿತಾರೂಢ ಕಾಂಗ್ರೆಸ್, ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳನ್ನು(ಬಿಎಲ್‌ಒ) ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಹಿರಿಯ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರೊಂದಿಗೆ ಮುಖ್ಯ ಚುನಾವಣಾ ಅಧಿಕಾರಿಯನ್ನು ಭೇಟಿ ಮಾಡಿ ಪಕ್ಷದ ಪರವಾಗಿ ದೂರು ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಚುನಾವಣಾ ಆಯೋಗವು ನಮ್ಮ ರಾಜ್ಯದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಉತ್ತಮ ಉದ್ದೇಶದಿಂದ ಪ್ರಾರಂಭಿಸಿದೆ. ಆದರೆ ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

"ಇಂದು, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ಒತ್ತಡ ಹೇರಲಾಗುತ್ತಿದೆ ಮತ್ತು ಅವರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ" ಎಂದು ವಿಜಯೇಂದ್ರ ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆಯಡಿಯಲ್ಲಿ, ಅಧಿಕಾರಿಗಳು ಮನೆ ಮನೆಗೆ ಹೋಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಚುನಾವಣಾ ಆಯೋಗ ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಈ ಕುರಿತಾದ ವಿವರಗಳನ್ನು ಸಾಕ್ಷಿ ಸಮೇತ ದೂರು ನೀಡಿದ್ದೇವೆ. ರಾಜ್ಯದಲ್ಲಿನ ಕಾಂಗ್ರೆಸ್ ವ್ಯವಸ್ಥೆ ಹಾಳು ಮಾಡುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ಪಕ್ಷದ ಬಿ ಎಲ್ ಎ ಗಳ ಗಮನಕ್ಕೆ ತರದೇ ಶಾಸಕರ ಕಚೇರಿಯಲ್ಲಿ, ಮಸೀದಿಯಲ್ಲಿ ಎಸ್ ಐ ಆರ್ ಪ್ರಕ್ರಿಯೆ ಆಗಿದೆ. ಹೀಗಾದಾಗ ಸಮಸ್ಯೆ ಆಗಿದೆ. ಈ ವಿಚಾರವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಲು ಮನವಿ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಆಸಾಮಿ; ಅರಣ್ಯ ಇಲಾಖೆ ದಾಳಿ!