ಸತೀಶ್ ಜಾರಕಿಹೊಳಿ  
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು; ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಬೆಂಗಳೂರು: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ ಸರ್ಕಾರ "ಎರಡು-ಮೂರು ದಿನಗಳವರೆಗೆ ಅಲುಗಾಡುತ್ತದೆ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದ ಅವರು , ಆಗಸ್ಟ್‌ನಲ್ಲಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ ಆದ್ರೆ ಏನು ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನಗಳು ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.

ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷವು ಉತ್ಸುಕವಾಗಿದೆ ಎಂದು ಹೇಳಲಾಗುತ್ತದೆ (ಕರ್ನಾಟಕವು 224 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ ಗರಿಷ್ಠ 34 ಮಂತ್ರಿಗಳನ್ನು ಹೊಂದಬಹುದು.

ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚರ್ಚೆ ಮಾಡುವ ಅಗತ್ಯ ಇಲ್ಲ. ಅಲ್ಲಿ ನಾವು ಯಾರನ್ನೂ ಗುರಿ ಮಾಡುತ್ತಿಲ್ಲ. ಕೆಲ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ತಾವು ಆ ಕ್ಷೇತ್ರಕ್ಕೆ ಭೇಟಿ ಮಾಡಿದ್ದು ನಿಜ. ಚುನಾವಣೆ ಬಂದಾಗ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ವಿವರಣೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!