ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು. 
ರಾಜಕೀಯ

ರಾಜ್ಯದ ಅಭಿವೃದ್ಧಿಗೆ ಕೈಜೋಡಿಸೋಣ; ಕರ್ನಾಟಕದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ: ರಾಜ್ಯ ಸರ್ಕಾರಕ್ಕೆ HDK ಮನವಿ

ಅರಣ್ಯ ಇಲಾಖೆಗೆ ಎಚ್‌ಎಂಟಿ ಭೂಮಿಯೊಂದಿಗೆ ಯಾವುದೇ ಸಂಬಂಧವಿಲ್ಲ, ಆ ಭೂಮಿಯ ಮೇಲೆ ಇಲಾಖೆಗೆ ಯಾವುದೇ ಹಕ್ಕು ಇಲ್ಲ.

ಬೆಂಗಳೂರು: ಎಚ್‌ಎಂಟಿ ಭೂಮಿ ವಿವಾದದ ಕುರಿತು ರಾಜ್ಯ ಸರ್ಕಾರದೊಂದಿಗೆ ವಾಕ್ಸಮರ ಮುಂದುವರಿದಿರುವ ನಡುವೆಯೇ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಸಹಕಾರದ ಸಂದೇಶ ನೀಡಿದ್ದಾರೆ.

ಭಿನ್ನಾಭಿಪ್ರಾಯಗಳಿದ್ದರೆ ದಾಖಲೆಗಳೊಂದಿಗೆ ಚರ್ಚಿಸಿ ಬಗೆಹರಿಸೋಣ. ಕರ್ನಾಟಕದ ಹಿತಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದ್ದಾರೆ.

ಇದೇ ವೇಳೆ ಎಚ್‌ಎಂಟಿ ಭೂಮಿ ವಿವಾದ ಕುರಿತು ಮಾತನಾಡಿದ ಅವರು, ಅರಣ್ಯ ಇಲಾಖೆಗೆ ಎಚ್‌ಎಂಟಿ ಭೂಮಿಯೊಂದಿಗೆ ಯಾವುದೇ ಸಂಬಂಧವಿಲ್ಲ, ಆ ಭೂಮಿಯ ಮೇಲೆ ಇಲಾಖೆಗೆ ಯಾವುದೇ ಹಕ್ಕು ಇಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ಕಾರಣಕ್ಕೋ ಮಾಜಿ ಅರಣ್ಯ ಸಚಿವರು ಎಚ್‌ಎಂಟಿ ಭೂಮಿಯ ಬಗ್ಗೆ ಅಸಾಮಾನ್ಯ ಆಸಕ್ತಿ ತೋರಿಸುತ್ತಿದ್ದಾರೆ. ಈ ನಿರ್ದಿಷ್ಟ ಜಮೀನಿನ ಬಗ್ಗೆ ಅವರಿಗೆ ಏಕೆ ಇಷ್ಟೊಂದು ಕಾಳಜಿ ಎಂಬುದು ನನಗೆ ಅರ್ಥವಾಗುತ್ತಿಲ್ಲ.

ಈಶ್ವರ ಖಂಡ್ರೆ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದರು. 1960ರಲ್ಲೇ ಅರಣ್ಯ ವ್ಯಾಪ್ತಿಯಿಂದ ಹೊರಗಿಡಲಾದ (ಡಿ-ನೋಟಿಫೈಡ್) ಭೂಮಿಗೆ ಜಿಲ್ಲಾ ಅರಣ್ಯಾಧಿಕಾರಿ (ಡಿಎಫ್‌ಒ) ಅವರಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲಾಗಿದ್ದು, ಬಳಿಕ ಅದನ್ನು ಎಚ್‌ಎಂಟಿಗೆ ಕಾನೂನುಬದ್ಧವಾಗಿ ಹಸ್ತಾಂತರಿಸಲಾಗಿದೆ. ಇಂತಹ ಭೂಮಿಯನ್ನು ಅತಿಕ್ರಮಿತ ಭೂಮಿ ಎಂದು ಬಿಂಬಿಸುವುದು ಸರಿಯಲ್ಲ ಎಂದು ಹೇಳಿದರು.

ಎಚ್‌ಎಂಟಿ ಭೂಮಿಗೆ ಸಂಬಂಧಿಸಿದ ವಿವಾದ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದು, ಸಂಸ್ಥೆಗೆ ಪುನಶ್ಚೇತನ ಪ್ಯಾಕೇಜ್ ದೊರಕಿಸುವ ಪ್ರಯತ್ನಗಳು ನಡೆಯುತ್ತಿವೆ.

ಈ ವಿಚಾರದಲ್ಲಿ ಸಾರ್ವಜನಿಕವಾಗಿ ಅನಗತ್ಯ ಹೇಳಿಕೆಗಳನ್ನು ನೀಡುವ ಬದಲು, ದಾಖಲೆಗಳ ಆಧಾರದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಯಾವುದೇ ಅನುಮಾನಗಳಿದ್ದರೆ ಬನ್ನಿ, ದಾಖಲೆಗಳನ್ನು ನಾನು ಸ್ವತಃ ತರುತ್ತೇನೆ. ಒಂದೇ ಮೇಜಿನ ಬಳಿ ಕುಳಿತು ಈ ವಿಷಯವನ್ನು ಬಗೆಹರಿಸೋಣ. ಇದೇ ಮನವಿಯನ್ನು ಹಿಂದಿನ ಮುಖ್ಯಮಂತ್ರಿಗೂ ಮಾಡಿದ್ದೆ. ನಾನು ಕರ್ನಾಟಕಕ್ಕೆ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದರೆ, ರಾಜ್ಯ ಸರ್ಕಾರ ಅಡ್ಡಿಪಡಿಸಬಾರದು. ಬಹಿರಂಗವಾಗಿ ಬೆಂಬಲ ನೀಡಿ. ರಾಜ್ಯದ ಹಿತಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್