ಆರ್ ಅಶೋಕ್  
ರಾಜಕೀಯ

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಬೆಳೆಭೂಮಿ ಸ್ವಾಧೀನ ಖಂಡನೀಯ, ಬೆದರಿಕೆ ನಿಲ್ಲಿಸಿ ಮಾತುಕತೆ ನಡೆಸಿ: ಆರ್.ಅಶೋಕ್

ರೈತರ ಮೇಲೆ ನಡೆಯುತ್ತಿರುವ ಬೆದರಿಕೆ ಮತ್ತು ಒತ್ತಡದ ರಾಜಕಾರಣವನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ರೈತರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಅಭಿಪ್ರಾಯಕ್ಕೆ ಗೌರವ ನೀಡಬೇಕು.

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಒಪ್ಪಿಗೆ ಇಲ್ಲದೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಮೇಲೆ ನಡೆಯುತ್ತಿರುವ ಬೆದರಿಕೆ ಮತ್ತು ಒತ್ತಡದ ರಾಜಕಾರಣವನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ರೈತರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಅಭಿಪ್ರಾಯಕ್ಕೆ ಗೌರವ ನೀಡಬೇಕು. ರೈತರ ಹೋರಾಟದಲ್ಲಿ ಬಿಜೆಪಿ ಸದಾ ಅವರೊಂದಿಗೆ ದೃಢವಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್‌ನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಅವರು ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಒಳಗೊಂಡ ಸಮಗ್ರ ಶ್ವೇತಪತ್ರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.

ಯೋಜನೆಗಾಗಿ ಸರ್ಕಾರದ ಬಳಿ ಈಗಾಗಲೇ ಎಷ್ಟು ಭೂಮಿ ಲಭ್ಯವಿದೆ, ಎಷ್ಟು ಖಾಸಗಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ ಹಾಗೂ ಗೋಮಾಳ ಭೂಮಿಯ ಪ್ರಮಾಣ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ರೈತರ ವಿರೋಧದ ನಡುವೆಯೇ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸಬಾರದು. ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ರೈತರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!