ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  
ರಾಜಕೀಯ

ಇಂದು CM ಡಿ.ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ

ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಾಯಂಕಾಲ ದೆಹಲಿ ತಲುಪಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬುಧವಾರ ಅಪರಾಹ್ನ ದೆಹಲಿಗೆ ತೆರಳಲಿದ್ದು, ಬೆಂಗಳೂರಿಗೆ ಯಾವಾಗ ಹಿಂತಿರುಗುತ್ತಾರೆ ಎಂದು ಸ್ಪಷ್ಟವಾಗಿ ನಿಗದಿಯಾಗದಿರುವುದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹೊಸ ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಾಯಂಕಾಲ ದೆಹಲಿ ತಲುಪಲಿದ್ದಾರೆ. ಅಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮ ಹೊಂದಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮುಖ್ಯಮಂತ್ರಿಯವರ ಈ ಭೇಟಿ ಸಚಿವಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರಸ್ತುತ ಮುಖ್ಯಮಂತ್ರಿ ಸೇರಿದಂತೆ ಕೇವಲ 14 ಸಚಿವರೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇವೆ.

ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಮರಳಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜುಲೈ 18ರಂದು ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಇದರಿಂದ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಒಪ್ಪಿಗೆ ನೀಡಿರುವ ಸೂಚನೆ ಸಿಗಬಹುದು ಎಂದು ಪಕ್ಷದ ವಲಯಗಳು ಹೇಳುತ್ತಿವೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಸಚಿವ ಸ್ಥಾನಕ್ಕೆ ಪರಿಗಣಿಸಬೇಕಾದವರ ಪಟ್ಟಿಯನ್ನು ಈಗಾಗಲೇ ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ಹೈಕಮಾಂಡ್ ಒಪ್ಪಿಗೆ ನೀಡಿದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಶೀಘ್ರದಲ್ಲೇ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜಕೀಯ ಹಾಗೂ ಪ್ರಾದೇಶಿಕ ಸಮತೋಲನ ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗೆ ಮಹತ್ವ ನೀಡುತ್ತಿದೆ.

ಪಕ್ಷದ 45ಕ್ಕೂ ಹೆಚ್ಚು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೋಟಿಯಲ್ಲಿದ್ದು, ಕಳೆದ ಕೆಲವು ದಿನಗಳಿಂದ ಬೆಂಗಳೂರು ಮತ್ತು ದೆಹಲಿಯಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪಕ್ಷದ ಮೂಲಗಳ ಪ್ರಕಾರ, ರಾಜ್ಯ ನಾಯಕತ್ವ ಮತ್ತು ಕಾಂಗ್ರೆಸ್ ಹೈಕಮಾಂಡ್ ನಡುವಿನ ಸಮಾಲೋಚನೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಜುಲೈ 20ರೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 40 ದಿನಗಳು ಕಳೆದಿದ್ದರೂ ಸಚಿವ ಸಂಪುಟ ವಿಸ್ತರಣೆ ಬಾಕಿ ಉಳಿದಿದೆ. ಇದೀಗ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆಯುವ ಚರ್ಚೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಆಗಸ್ಟ್ ಮೊದಲ ವಾರದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ, ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಾಗಿದೆ.

ಸಿದ್ದರಾಮಯ್ಯ ಸಹ ದೆಹಲಿಗೆ ಪಯಣ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಇಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಬಂದಿದ್ದು ಹೈಕಮಾಂಡ್ ಸಿಎಂ ಮತ್ತು ಮಾಜಿ ಸಿಎಂ ಅವರ ಸಮ್ಮುಖದಲ್ಲಿ ಇನ್ನೆರಡು ದಿನಗಳೊಳಗೆ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಭಾವಿಸುವ ಹಿಂದೂ ಹಿಂದೂವೇ ಅಲ್ಲ- ಅಮೆರಿಕದಲ್ಲಿ ಮೋಹನ್ ಭಾಗವತ್

ಐಕಾನಿಕ್ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಫೋಟೋ!

Nepal floods: ಮೃತರ ಸಂಖ್ಯೆ 675ಕ್ಕೆ ಏರಿಕೆ; ರಾಸುವಾ ಜಲವಿದ್ಯುತ್ ಯೋಜನೆ ಸ್ಥಳದಿಂದ ನಾಲ್ವರು ಭಾರತೀಯರ ರಕ್ಷಣೆ!

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!