ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

ಸಚಿವ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಯಿಂದ ಕಾಂಗ್ರೆಸ್ ಮತ್ತಷ್ಟು ಬಲಿಷ್ಠ: ಸತೀಶ್ ಜಾರಕಿಹೊಳಿ

ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದು, ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದೆ ಎಂದು ತಿಳಿಸಿದರು.

ಬೆಳಗಾವಿ: ರಾಜ್ಯ ಸಚಿವ ಸಂಪುಟಕ್ಕೆ ಹೊಸ ಮುಖಗಳನ್ನು ಸೇರಿಸಿದರೆ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗುವುದರ ಜೊತೆಗೆ ಭವಿಷ್ಯದ ನಾಯಕತ್ವವೂ ರೂಪುಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ನಾಯಕರು ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದು, ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ, ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಇನ್ನೊಂದು ಸ್ಥಾನ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಅವರು, ರಾಜಕೀಯ ಲಾಭಕ್ಕಾಗಿ ಕೆಲವರು ಉದ್ದೇಶಪೂರ್ವಕವಾಗಿ ಭಿನ್ನಾಭಿಪ್ರಾಯದ ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಚಿತ್ರಣವನ್ನು ಕೆಲವರು ಉದ್ದೇಶಪೂರ್ವಕವಾಗಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇಂತಹ ರಾಜಕೀಯ ಪ್ರೇರಿತ ಪ್ರಯತ್ನಗಳು ಹೆಚ್ಚು ಕಾಲ ಯಶಸ್ವಿಯಾಗುವುದಿಲ್ಲ. ನಾನು ನನ್ನ ಹಿಂದಿನ ಹೇಳಿಕೆಯಲ್ಲಿ ಎಲ್ಲಿಯೂ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ. ನನ್ನ ಹೇಳಿಕೆಯನ್ನು ಅವರೊಂದಿಗೆ ಮಾಧ್ಯಮವೇ ಜೋಡಿಸಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!