ರಾಜೇಂದ್ರ ರಾಜಣ್ಣ 
ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ನನಗೆ ಕೊಡಿ ಇಲ್ಲ ನಮ್ಮಪ್ಪಂಗೆ ಕೊಡಿ- ರಾಜೇಂದ್ರ; ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ!

ತಮ್ಮ ಕುಟುಂಬಕ್ಕೂ ಸಚಿವ ಸ್ಥಾನದಲ್ಲಿ ಅವಕಾಶ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಮೊದಲ ಆದ್ಯತೆಯಾಗಿ ತಮ್ಮ ತಂದೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಿದ್ದು,

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಈ ವಾರದಲ್ಲೇ ನಡೆಯುವ ಸಾಧ್ಯತೆಗಳು ದಟ್ಟವಾಗಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಪ್ರಯಾಣಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಅಥವಾ ನಾಳೆ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳವಣಿಗೆಗಳು ನಡೆಯುವ ಮಾಹಿತಿ ಲಭ್ಯವಾಗಿದ್ದು, ಈ ವಾರದೊಳಗೆ ವಿಸ್ತರಣೆ ಖಚಿತವಾಗುವ ವಿಶ್ವಾಸವಿದೆ ಎಂದು ಹೇಳಿದರು.

ಇನ್ನು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ ರಾಜಣ್ಣ, ತಮ್ಮ ಕುಟುಂಬಕ್ಕೂ ಸಚಿವ ಸ್ಥಾನದಲ್ಲಿ ಅವಕಾಶ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಮೊದಲ ಆದ್ಯತೆಯಾಗಿ ತಮ್ಮ ತಂದೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಿದ್ದು, ಅದು ಸಾಧ್ಯವಾಗದಿದ್ದರೆ ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕೋರಲಿದ್ದೇನೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆಯ ಜೊತೆಯಲ್ಲೇ ಇನ್ನೂ ಇಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಚರ್ಚೆ ನಡೆಸಿದೆ. ಇದರೊಂದಿಗೆ ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ ಇದೆ,

ಇನ್ನೂ ರಾಜ್ಯದಲ್ಲಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಮೂರಕ್ಕೇರುವ ಸಾಧ್ಯತೆ ಇದೆ. ಲಿಂಗಾಯತರು ಮತ್ತು ಅಹಿಂದ ಸಮುದಾಯದ ತಲಾ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ಕಾಂಗ್ರೆಸ್‌ ವರಿಷ್ಠರು ಚಿಂತನೆ ನಡೆಸಿದ್ದಾರೆ.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹೆಸರುಗಳು ಸಂಭಾವ್ಯ ಉಪ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!

ಪಾಕಿಸ್ತಾನಕ್ಕೆ Iran ರಹಸ್ಯ ಸಂದೇಶ: Asim Munir ಜೊತೆ ಮಹತ್ವದ ಮಾತುಕತೆ, Khamenei ಕಳುಹಿಸಿದ ಆ ರಹಸ್ಯ ಪತ್ರದಲ್ಲೇನಿದೆ?