ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ 
ರಾಜಕೀಯ

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ; ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ: ಆರ್. ಅಶೋಕ್ ಆರೋಪ

ಈ ಹೆಚ್ಚುವರಿ ನೀರಿನ ಬಿಡುಗಡೆ ಕಾವೇರಿ ಜಲಾನಯನ ಪ್ರದೇಶದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಬೆಂಗಳೂರಿನ ನೀರಿನ ಭದ್ರತೆಯ ಮೇಲೂ ಪರಿಣಾಮ ಉಂಟುಮಾಡಿ, ಟ್ಯಾಂಕರ್ ನೀರಿನ ಮೇಲಿನ ಅವಲಂಬನೆಯನ್ನು ಮತ್ತಷ್ಟು ಹೆಚ್ಚಿಸಬಹುದು.

ಬೆಂಗಳೂರು: ಮೇ 2025-26ರ ಅವಧಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದ ಹಿತಾಸಕ್ತಿಗೆ ದ್ರೋಹ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಳಿಗುಂಡ್ಲು ಗಡಿಭಾಗದಲ್ಲಿ ತಮಿಳುನಾಡಿಗೆ 2.5 ಟಿಎಂಸಿ ಅಡಿ ನೀರು ಹರಿಯುವಂತೆ ಖಚಿತಪಡಿಸಬೇಕಿದ್ದರೂ, ಕರ್ನಾಟಕ ಸರ್ಕಾರ 3.101 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ. ಅಂದರೆ, 0.601 ಟಿಎಂಸಿ ಅಡಿ ಹೆಚ್ಚುವರಿ ನೀರು ಹರಿಸಲಾಗಿದೆ ಎಂದು ಆರೋಪಿಸಿದರು.

ಈ ಹೆಚ್ಚುವರಿ ನೀರಿನ ಬಿಡುಗಡೆ ಕಾವೇರಿ ಜಲಾನಯನ ಪ್ರದೇಶದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಬೆಂಗಳೂರಿನ ನೀರಿನ ಭದ್ರತೆಯ ಮೇಲೂ ಪರಿಣಾಮ ಉಂಟುಮಾಡಿ, ಟ್ಯಾಂಕರ್ ನೀರಿನ ಮೇಲಿನ ಅವಲಂಬನೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿರುವುದು "ಕರ್ನಾಟಕದ ಹಿತಾಸಕ್ತಿಗೆ ಮಾಡಿದ ದ್ರೋಹ" ಎಂದು ಟೀಕಿಸಿದರ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು. ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಬಿಡುಗಡೆ ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ಕಾವೇರಿ ಕದನ: 20 TMC ನೀರಿಗೆ ತಮಿಳುನಾಡು ಪಟ್ಟು, ಬರ ಪರಿಸ್ಥಿತಿ ಮುಂದಿಟ್ಟ ಕರ್ನಾಟಕ..!