ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...

ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್​​ ಹಂತ ತಲುಪುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರ ಬಳಿ ಕ್ಷಮೆಯಾಚಿಸುವ ಮೂಲಕ ತೀವ್ರ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಗುರುವಾರ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಬಾರಿ ಹೊಸ ಸಮೀಕರಣದೊಂದಿಗೆ, ಸಚಿವ ಸ್ಥಾನ ಭರ್ತಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್​​ ಹಂತ ತಲುಪುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರ ಬಳಿ ಕ್ಷಮೆಯಾಚಿಸುವ ಮೂಲಕ ತೀವ್ರ ಸಂಚಲನ ಮೂಡಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ತಮ್ಮ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಷಡ್ಯಂತ್ರ ಹಾಗೂ ಪಿತೂರಿ ನಡೆಸಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚಿಗೆ ನಡೆದ ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿಗಳನ್ನು ಹರಡಲಾಗಿದೆ ಎಂದು ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ನನ್ನಿಂದ ಏನಾದರೂ ತಪ್ಪಾಗಿದ್ದರೆ ನಾನು ಹೈಕಮಾಂಡ್ ಬಳಿ ಕ್ಷಮೆ ಕೇಳುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಲ್ಲೂ ಕ್ಷಮೆಯಾಚಿಸುತ್ತೇನೆ ಎಂದು ಮಾಜಿ ಸಚಿವ ಹೇಳಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ನಾನು ಮನವಿ ಮಾಡಿದ್ದು ನಿಜ. ಆದರೆ ಬಳಿಕ ಅಗಲಿದ ನಾಯಕರ/ಮೃತರ ಕುಟುಂಬಕ್ಕೇ ಟಿಕೆಟ್ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ