ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜಕೀಯ

ಜುಲೈ 30ಕ್ಕೆ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ರಾಜ್ಯಪಾಲರ ಕಚೇರಿಗೆ ಸರ್ಕಾರ ಅನೌಪಚಾರಿಕ ಮಾಹಿತಿ

ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್​​ ಹಂತ ತಲುಪಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಜುಲೈ 30 ಗುರುವಾರ ಅಪರಾಹ್ನ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರವು ಅನೌಪಚಾರಿಕವಾಗಿ ರಾಜ್ಯಪಾಲರ ಕಚೇರಿಗೆ ಮಾಹಿತಿ ನೀಡಿದೆ.

ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಗುರುವಾರ ಪ್ರಮಾಣವಚನ

ರಾಹುಲ್ ಗಾಂಧಿ ಜೊತೆ ಸಿಎಂ ಡಿಕೆ ಶಿವಕುಮಾರ್​, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು ರಾತ್ರಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲೇ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಗುರುವಾರ ಅಪರಾಹ್ನ ಲೋಕಭವನದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿ ಅಂತಿಮ

ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಸೋಮವಾರವೇ ದೆಹಲಿಗೆ ತಲುಪಿದ್ದರು. ಖಾಲಿ ಇರುವ 20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿಯನ್ನು ಮಾತ್ರ ಅಂತಿಮಗೊಳಿಸಿ, ಎರಡು ಸ್ಥಾನಗಳನ್ನು ಖಾಲಿ ಇಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ