ಎಸ್ ಎಸ್ ಮಲ್ಲಿಕಾರ್ಜುನ್ 
ರಾಜಕೀಯ

ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ

ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್‌ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ: ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತೀವ್ರ ಕಿಡಿಕಾರಿದ್ದಾರೆ.

ಮಾಜಿ ಸಚಿನ ಜಮೀರ್ ಮತ್ತು ಸಿರಾಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ, ಈ ಕುರಿತು ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್‌ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಇಷ್ಟಕ್ಕೂ ಆಡಿಯೋದಲ್ಲೇನಿದೆ?

ಆಡಿಯೋದಲ್ಲಿ ಮುಸ್ಲಿಮರೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಪಕ್ಷೇತರರಿಗೆ ವೋಟ್‌ ಹಾಕಬೇಕು ಎಂದು ಆಗ್ರಹಿಸುವುದು ಎಂದು ಹೇಳಿದ್ದಾರೆ ಎನ್ನ. ಒಂದು ವೇಳೆ ಮುಸ್ಲಿಮರು ವೋಟ್‌ ಹಾಕಿಲ್ಲ ಅಂದ್ರೂ ಓಕೆ, ಕಾಂಗ್ರೆಸ್‌ ವೋಟ್‌ ಗಳು ಮೈನಸ್‌ ಆಗಬೇಕು.

ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ವೋಟ್ ಹಾಕಬೇಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ವೋಟ್ ಹಾಕಿಸಬೇಡಿ ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ

ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಎಸ್ ಮಲ್ಲಿಕಾರ್ಜುನ್ ಅವರು, 'ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ' ಎಂದರು.

ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ. ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು. ಜನರ ಆಶೀರ್ವಾದದಿಂದ ನಮ್ಮ ಮಗ ಗೆದ್ದಿದ್ದಾನೆ. ಆಡಿಯೋ ವೈರಲ್ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.

ಅಂತೆಯೇ ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

ಜಮೀರ್ ಆಪ್ತ ಸಿರಾಜ್ ದೂರು

ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಪ್ರಕರಣ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಸುಳ್ಳು ಆಡಿಯೋ ಸೃಷ್ಟಿಸಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೊಹಮ್ಮದ್ ಸಿರಾಜ್ ಅವರು ದಾವಣಗೆರೆಯ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

"ನಾನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ನಾಮನಿರ್ದೇಶಿತ ಸದಸ್ಯನಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ, ರಾಜಕೀಯ ದುರುದ್ದೇಶದಿಂದ ನಮ್ಮನ್ನು ಗುರಿಯಾಗಿಸಿಕೊಂಡು ಈ ನಕಲಿ ಆಡಿಯೋ ಸೃಷ್ಟಿಸಲಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಅವಕಾಶ ವಂಚಿತ ಇಂಡಿ; ಡಿಕೆಶಿ ಸರ್ಕಾರದಲ್ಲಿ ಸ್ಥಾನ ಸಿಗುವ ನಿರೀಕ್ಷೆ, ಯಾರೆಲ್ಲಾ ಇದ್ದಾರೆ ಸಚಿವ ಸ್ಥಾನದ ರೇಸ್ ನಲ್ಲಿ?

ಟ್ರಂಪ್ ಒತ್ತಡಕ್ಕೆ ಮಣಿದ ನೆತನ್ಯಾಹು; ಲೆಬನಾನ್ ಮೇಲಿನ ದಾಳಿಗೆ ಬ್ರೇಕ್, ಸಂಘರ್ಷ ನಿಲ್ಲಿಸಲು ಇಸ್ರೇಲ್-ಹಿಜ್ಬುಲ್ಲಾ ಸಮ್ಮತಿ..!

ಲೆಬನಾನ್ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಸ್ಫೋಟ, 'ನಾನಿಲ್ಲದಿದ್ದರೆ ಜೈಲಿನಲ್ಲಿರುತ್ತಿದ್ದೆ'; ನೆತನ್ಯಾಹು ವಿರುದ್ಧ ಗುಡುಗಿದ ಟ್ರಂಪ್

RCB ವಿಕ್ಟರಿ ಶ್ಲಾಘಿಸಿದ ಆಸ್ಟ್ರೇಲಿಯಾ ಉಪ ಪ್ರಧಾನಿ; Virat kohli ಪ್ರದರ್ಶನಕ್ಕೆ Richard Marles ಫುಲ್ ಫಿದಾ, ಹೇಜಲ್ವುಡ್, ಟಿಮ್ ಡೇವಿಡ್ ಗೂ ಮೆಚ್ಚುಗೆ!

SCROLL FOR NEXT