ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯಗೆ ಮಹತ್ವದ ಸ್ಥಾನ: ಕಾಂಗ್ರೆಸ್‌ ಪರಮೋಚ್ಚ ಸಮಿತಿಗೆ ನೇಮಕ

ಕಳೆದ ತಿಂಗಳು, ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುತ್ತದೆ ಎಂದು ವರದಿಯಾಗಿತ್ತು.

ನವದೆಹಲಿ: ಕಳೆದ ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಅತ್ಯಂತ ಗೌರವಯುತವಾಗಿ ಅಧಿಕಾರ ಹಸ್ತಾಂತರ ಮಾಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ಮಹತ್ವದ ಹುದ್ದೆ ನೀಡಿದೆ.

ಕಳೆದ ತಿಂಗಳು, ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುತ್ತದೆ ಎಂದು ವರದಿಯಾಗಿತ್ತು. ಅದರಂತೆ ಈಗ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸದಸ್ಯ ಸ್ಥಾನ ನೀಡಿ ಆದೇಶ ಹೊರಡಿಸಿದೆ.

ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯ ಅವರನ್ನು ಸಿಡಬ್ಲ್ಯೂಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ಮತ್ತೆ ಪರಮೋಚ್ಚ ಸಮಿತಿಗೆ ಮರಳಿದ್ದಾರೆ.

ಹಿಂದೆ 2018 ರಲ್ಲಿ ಆಗಿನ ಪಕ್ಷದ ಮುಖ್ಯಸ್ಥ ರಾಹುಲ್ ಗಾಂಧಿಯವರ ಪುನರ್ರಚನೆಯಲ್ಲಿ, ಸಿದ್ದರಾಮಯ್ಯ ಅವರನ್ನು ಸಿಡಬ್ಲ್ಯೂಸಿಗೆ ಸೇರಿಸಲಾಗಿತ್ತು. ಆದರೆ 2019 ರಲ್ಲಿ ಅವರನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದಾಗ ಸಿಡಬ್ಲ್ಯೂಸಿ ಸ್ಥಾನದಿಂದ ಕೈಬಿಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಅಜಿತ್ ಕುಮಾರ್ 'ಲಂಡನ್ ರೇಸ್' ನಲ್ಲೂ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ತಲಾ, ದಳಪತಿ ಫ್ಯಾನ್ಸ್ ಫುಲ್ ಖುಷ್! Video

ED ದೂರಿನ ಹಿಂದೆ ಬಿಜೆಪಿಯ ಕೈವಾಡವಿದೆ: ಚಿನ್ನದ ಗಣಿಗಾರಿಕೆ ಕುರಿತ ಆರೋಪ ಸಾಬೀತುಪಡಿಸಲಿ- ಸತೀಶ್ ಜಾರಕಿಹೊಳಿ ಸವಾಲು!