ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ.

ಬೆಂಗಳೂರು: ಒಟ್ಟು 10 ರಾಜ್ಯಗಳ 24 ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ 7 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.

ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ.

ರಾಜ್ಯದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳು ತೆರವಾಗಲಿದ್ದು, ಆ ಪೈಕಿ ಕಾಂಗ್ರೆಸ್ ಸಂಖ್ಯಾಬಲದಂತೆ 3 ಸ್ಥಾನ ಗೆಲ್ಲಬಹುದಾಗಿದೆ. ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮರು ಆಯ್ಕೆಗಾಗಿ ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಉಳಿದಿರುವ ಎರಡು ರಾಜ್ಯಸಭೆ ಸ್ಥಾನಕ್ಕೆ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಹೆಸರನ್ನು ಘೋಷಿಸಿದೆ. ಮಧ್ಯ ಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ದಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್ ನಿಂದ ಪ್ರಣವ್ ಜಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಜೂನ್ 18ಕ್ಕೆ ರಾಜ್ಯಸಭೆ ಚುನಾವಣೆ ನಡೆಯಲಿದೆ. ಜೂನ್ 8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಇನ್ನು ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭೆ ಸ್ಥಾನ ನೀಡುವ ಬಗ್ಗೆ ಗೊಂದಲ ಮುಂದುವರಿದಿದೆ. ರಾಜ್ಯ ಬಿಜೆಪಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಶಾಸಕ ನಿರ್ಮಲ ಕುಮಾರ್ ಸುರಾನ ಹೆಸರುಗಳನ್ನು ಹೈ ಕಮಾಂಡ್ ಗೆ ಕಳುಹಿಸಿದೆ. ಹೈ ಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!