ಸಚಿವ ರಾಮಲಿಂಗಾರೆಡ್ಡಿ 
ರಾಜಕೀಯ

ಖಾತೆಗಾಗಿ ಫೈಟ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಮಲಿಂಗಾ ರೆಡ್ಡಿ ಮುಂದು!

ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ನೂತನ ಸಚಿವರ ನಡುವೆ ಈಗ ಖಾತೆಗಾಗಿ ಫೈಟ್ ಆರಂಭವಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಸಚಿವ ರಾಮಲಿಂಗಾರೆಡ್ಡಿಅವರು ಪಟ್ಟು ಹಿಡಿದಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮಾರನೇ ದಿನವೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ನ ಪ್ರಭಾವಿ ಹಾಗೂ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೇ ಸಚಿವ ಸ್ಥಾನವೇ ಬೇಡ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಹ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಿತ್ತು. ಆದರೆ ಆಗಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿ ಅವರ ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಾನು ಪಡೆಯುತ್ತೇನೆ. ನಾನು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು ಎನ್ನಲಾಗಿದೆ.

ಆದರೆ ಈಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಅವರಲ್ಲಿ ಬೇಸರ ಮೂಡಿಸಿದೆ. ನನಗೆ ಸಚಿವ ಸ್ಥಾನವೇ ಬೇಡ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಹೇಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!