ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. 
ರಾಜಕೀಯ

4 ರಾಜ್ಯಸಭಾ ಸ್ಥಾನಗಳಿಗೆ ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿಯ ನಡೆ!

ಮರು ಆಯ್ಕೆ ಬಯಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ ಹಾಗೂ ಮನ್ಸೂರ್‌ ಅಲಿ ಖಾನ್‌ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹಾಗೂ ಪ್ರೊ.ಎಂ.ನಾಗರಾಜ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ಜೂನ್ 18 ರಂದು ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರದ ವೇಳೆಗೆ ಒಟ್ಟು ಐದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೊಡಗಿನ ಬೋಜಣ್ಣ ಸೋಮಯ್ಯ ಅವರು ಉಮೇದುವಾರಿಕೆ ಸಲ್ಲಿಸಿದ್ದು, ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ಸಂಸದರಾದ ಈರಣ್ಣ ಕಡಾಡಿ, ನಾರಾಯಣ ಕೊರಗಪ್ಪ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿರುವ ಕಾರಣ ಈ ಚುನಾವಣೆ ನಡೆಯುತ್ತಿದೆ.

ಮರು ಆಯ್ಕೆ ಬಯಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ ಹಾಗೂ ಮನ್ಸೂರ್‌ ಅಲಿ ಖಾನ್‌ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹಾಗೂ ಪ್ರೊ.ಎಂ.ನಾಗರಾಜ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಬಿಜೆಪಿ ಅಭ್ಯರ್ಥಿ ನಾಗರಾಜ ಅವರು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಇತರ ನಾಯಕರ ಸಮ್ಮುಖದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಜೂನ್ 11 ಕೊನೆಯ ದಿನವಾಗಿದೆ. ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಅಂದೆ ಮತ ಎಣಿಕೆ ನಡೆಯಲಿದೆ.

ವಿಧಾನಸಭೆಯಲ್ಲಿ ಪ್ರಸ್ತುತ ಬಲವನ್ನು ಗಮನಿಸಿದರೆ, ಆಡಳಿತಾರೂಢ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಮೂರನ್ನು ಗೆಲ್ಲುವ ನಿರೀಕ್ಷೆಯಿದೆ. ಆದರೆ ಬಿಜೆಪಿ ಒಂದು ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ.

ಗೆಲ್ಲಲು ಸಾಧ್ಯವಾಗುವಷ್ಟು ಶಾಸಕರ ಸಂಖ್ಯಾಬಲ ಇಲ್ಲದಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್‌ ಇರುವುದರಿಂದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಲಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಬೋಜಣ್ಣ ಸೋಮಯ್ಯ ಅವರು ಉಮೇದುವಾರಿಕೆ ಸಲ್ಲಿಸಿದ್ದರೂ ಅವರ ನಾಮಪತ್ರಕ್ಕೆ ಸೂಚಕರ ಸಹಿ ಇಲ್ಲದಿರುವ ಹಿನ್ನೆಲೆಯಲ್ಲಿ ಬಹುತೇಕ ತಿರಸ್ಕೃತವಾಗಲಿದೆ. ಹೀಗಾಗಿ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿಯುವ ಕಾಂಗ್ರೆಸ್‌‍ನ ಮೂವರು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 134 ಶಾಸಕರನ್ನು ಹೊಂದಿದೆ. ಬಿಜೆಪಿ 62 ಸದಸ್ಯರನ್ನು ಹೊಂದಿದೆ. ಜೆಡಿ(ಎಸ್) 18 ಶಾಸಕರನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

ಜಪಾನ್ ವಿರುದ್ಧ ಗೋಲ್ಡನ್ ಡಕ್; Unwanted Record ಸೃಷ್ಟಿಸಿದ ಅಭಿಷೇಕ್ ಶರ್ಮಾ: ಈ ದಾಖಲೆ ಮುರಿಯುವುದು ಯಾರಿಗೂ ಅಸಾಧ್ಯ!

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!