ಬಿ.ವೈ. ವಿಜಯೇಂದ್ರ  
ರಾಜಕೀಯ

'ದೇವೇಗೌಡರನ್ನು ರಾಜಕೀಯ ಜೀವನದುದ್ದಕ್ಕೂ ಕಾಡಿದ್ದು ಕಾಂಗ್ರೆಸ್; ಅವರ ವಿಚಾರವಾಗಿ ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ'

ದೇವೇಗೌಡರನ್ನು ಪ್ರಧಾನಿ ಪದವಿಯಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್‌ ಪಕ್ಷದ ಮೇಲಿರುವುದನ್ನು ಕಾಂಗ್ರೆಸ್ ಮುಂದಾಳುಗಳು ಮರೆತಂತಿದೆ. ಇಷ್ಟಾಗಿಯೂ ಕೊಳಕು ರಾಜಕಾರಣ ಮಾಡುವುದನ್ನು ನಿಲ್ಲಿಸದ ಕಾಂಗ್ರೆಸ್ಸಿಗರು, ದೇವೇಗೌಡರ ಕುರಿತು ಕೃತಕ ಕಾಳಜಿಯ ಮಾತನಾಡುತ್ತಿರುವ ಪರಿ ಹಾಸ್ಯಾಸ್ಪದವಾಗಿದೆ.

ಬೆಂಗಳೂರು: ದೇಶದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗ ಎಂದು ಎನಿಸಿಕೊಂಡಿದ್ದ ದೇವೇಗೌಡರ ಕುರಿತು ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇವೇಗೌಡರನ್ನು ಪ್ರಧಾನಿ ಪದವಿಯಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್‌ ಪಕ್ಷದ ಮೇಲಿರುವುದನ್ನು ಕಾಂಗ್ರೆಸ್ ಮುಂದಾಳುಗಳು ಮರೆತಂತಿದೆ. ಮಾನ್ಯ ದೇವೇಗೌಡರನ್ನು ರಾಜಕೀಯ ಜೀವನದುದ್ದಕ್ಕೂ ಕಾಡಿದ್ದು, ಅವರ ಪಕ್ಷವನ್ನು ಇಬ್ಬಾಗ ಮಾಡಲು ಯತ್ನಿಸಿದ್ದು ಕಾಂಗ್ರೆಸ್.

ಇಷ್ಟಾಗಿಯೂ ಕೊಳಕು ರಾಜಕಾರಣ ಮಾಡುವುದನ್ನು ನಿಲ್ಲಿಸದ ಕಾಂಗ್ರೆಸ್ಸಿಗರು, ದೇವೇಗೌಡರ ಕುರಿತು ಕೃತಕ ಕಾಳಜಿಯ ಮಾತನಾಡುತ್ತಿರುವ ಪರಿ ಹಾಸ್ಯಾಸ್ಪದವಾಗಿದೆ.

ಭಾರತೀಯ ಜನತಾ ಪಾರ್ಟಿಯು ಸನ್ಮಾನ್ಯ ದೇವೇಗೌಡ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ಭಾರತದ ಸಮಗ್ರತೆ ಉಳಿಯಬೇಕಾದರೆ, ಅಭಿವೃದ್ಧಿ ಹೊಂದಬೇಕಾದರೆ ಅದು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಆಡಳಿತದಿಂದ ಮಾತ್ರ ಸಾಧ್ಯ ಎಂಬ ನಂಬಿಕೆಯಿಂದ ದೇವೇಗೌಡ ಅವರು ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿ, ಎನ್ ಡಿಗೆ ತಮ್ಮ ಜೆಡಿಎಸ್ ಪಕ್ಷವನ್ನು ಸೇರಿಸಿದ್ದಾರೆ.

ಇದನ್ನು ಕಂಡು ಸಹಿಸಲಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ಸಿಗರು ದೇವೇಗೌಡರ ಹೆಸರನ್ನು ಬಳಸಿಕೊಂಡು ರಾಜಕಾರಣ ಮಾಡಲು ಹೊರಟಿರುವುದು ನಾಚಿಗೆಗೇಡಿತನದ ಪರಮಾವಧಿಯಾಗಿದೆ.

ಅವರ ಹಿರಿತನ, ಸೇವೆ ಉಲ್ಲೇಕಿಸಿ ಸಂಸತ್ತಿನಲ್ಲಿ ಸ್ವತಃ ಪ್ರಧಾನ ಮಂತ್ರಿಗಳೇ ಭಾವುಕವಾಗಿ ಮಾತನಾಡಿ ಅವರ ಕೊಡುಗೆ, ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ರಾಷ್ಟವನ್ನು ಮುನ್ನಡೆಸುವ ನಿಟ್ಟಿನಲ್ಲಿ ಅವರ ಮಾರ್ಗದರ್ಶನ ಸದಾ ನಮಗೆ ಬೇಕೆಂದು ಹೇಳಿದ್ದಾರೆ. ಈ

ನಿಟ್ಟಿನಲ್ಲಿ ಅತ್ಯುತ್ತಮ ರಾಜಕೀಯ ಹಾಗೂ ವ್ಯಕ್ತಿಗತ ಗೌರವಗಳ ಬಾಂಧವ್ಯವಿರುವ ದೇವೇಗೌಡರೊಂದಿಗಿನ ಸಂಬಂಧಕ್ಕೆ ಹುಳಿ ಹಿಂಡುವ ಮಾತುಗಳು ‘ಕಾಂಗ್ರೆಸ್ಸಿಗರ ವಿಕೃತ ನಡೆ‘ ಎನ್ನುವದನ್ನು ಕರ್ನಾಟಕದ ಜನತೆ ಅರ್ಥೈಸಿಕೊಳ್ಳದಷ್ಟು ಮುಗ್ಧರಲ್ಲ ಎನ್ನುವ ತಿಳುವಳಿಕೆ ಕಾಂಗ್ರೆಸ್ಸಿಗರಿಗಿರಲಿ ಎಂದು ವಿಜಯೇಂದ್ರ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!

ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!

ಸರ್ಕಾರದ ಬೊಕ್ಕಸಕ್ಕೆ ಕಿಕ್ ಕೊಟ್ಟ ಮದ್ಯ ಪ್ರಿಯರು: ಮಾರಾಟ ಶೇ.41ರಷ್ಟು ಹೆಚ್ಚಳ, ಅಬಕಾರಿ ಆದಾಯ ಭಾರೀ ಏರಿಕೆ..!