ಡಿ ಕೆ ಶಿವಕುಮಾರ್  
ರಾಜಕೀಯ

ಖಾತೆ ಖ್ಯಾತೆ ನಡುವೆ ಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪಯಣ; ಹೈಕಮಾಂಡ್, ಪ್ರಧಾನಿ ಭೇಟಿ ನಿರೀಕ್ಷೆ; ಡಿಸಿಎಂ ಸಾಥ್; Video

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದು, ಕೆಲವು ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಬೆಂಗಳೂರು: ಸಚಿವರ ಖಾತೆ ಖ್ಯಾತೆ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕಮಾಂಡ್ ಭೇಟಿಗಾಗಿ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅವರ ಜೊತೆ ಡಿಸಿಎಂ ಡಾ ಜಿ ಪರಮೇಶ್ವರ್ ಕೂಡ ತೆರಳಿದ್ದಾರೆ, ಖಾತೆ ಹಂಚಿಕೆ ಕುರಿತಂತೆ ಕೆಲವು ಸಚಿವರ ಅಸಮಾಧಾನದ ನಡುವೆಯೂ ಸಂಪುಟ ವಿಸ್ತರಣೆ ಮತ್ತು ಇನ್ನುಳಿದ ಖಾತೆಗಳ ಹಂಚಿಕೆ ವಿಷಯಗಳ ಕುರಿತು ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದು, ಕೆಲವು ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಮೊದಲಿಗೆ ಎಐಸಿಸಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಎಐಸಿಸಿ ಕಚೇರಿ ಮತ್ತು ಪಕ್ಷದ ವಿವಿಧ ಮುಂಭಾಗದ ಸಂಸ್ಥೆಗಳ ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಗುರುವಾರ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಿಎಂ ಡಿಕೆ ಶಿವಕುಮಾರ್ ಸಮಯ ಕೇಳಿದ್ದಾರೆ. ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆಯಲ್ಲಿ ಡಿಕೆಶಿ ಭಾಗಿಯಾಗಲಿದ್ದಾರೆ. ಈ ಸಭೆಯ ಹೊರತಾಗಿ ಪ್ರತ್ಯೇಕ ಭೇಟಿಗೆ ಡಿಕೆಶಿ ಸಮಯ ಕೇಳಿದ್ದಾರೆ.

ನಾಳೆ ಮುಖ್ಯಮಂತ್ರಿ ಅವರು ನೀತಿ ಆಯೋಗದ 11ನೇ ಆಡಳಿತ ಮಂಡಳಿ (ಗವರ್ನಿಂಗ್ ಕೌನ್ಸಿಲ್) ಸಭೆಯಲ್ಲಿ ಭಾಗವಹಿಸಲಿದ್ದಾರೆ.

2025ರಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ವನಿಗದಿತ ಕಾರ್ಯಕ್ರಮಗಳ ಕಾರಣ ನೀಡಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಗೆ ಗೈರಾಗಿದ್ದರು. ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆ ಸಭೆಗೆ ತಮ್ಮ ಸಂದೇಶವನ್ನು ಕಳುಹಿಸಿ ಮಂಡಿಸಲು ಸೂಚಿಸಿದ್ದರು.

ಕರ್ನಾಟಕ ಭವನ ಸ್ವಾಗತಕ್ಕೆ ಸಜ್ಜು

ಹಿಂದೆ ಕರ್ನಾಟಕ ಭವನದ ಕಾರ್ಯವೈಖರಿಗೆ ಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ಗ್ರ‍್ಯಾಂಡ್ ವೆಲ್ಕಮ್‌ಗೆ ಕರ್ನಾಟಕ ಭವನ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿಯಾಗಿ ಮೊದಲ ಬಾರಿ ಆಗಮನ ಹಿನ್ನೆಲೆ ಅದ್ಧೂರಿ ಸ್ವಾಗತ ಕೋರಲು ಕರ್ನಾಟಕ ಭವನ ಸಿಬ್ಬಂದಿ ತಯಾರಿ ನಡೆಸಿದ್ದಾರೆ. ಕರ್ನಾಟಕ ಭವನಕ್ಕೆ ತಳಿರು ತೋರಣ, ಹೂವಿನ ಅಲಂಕಾರದ ಮೂಲಕ ಡಿಕೆಶಿಗೆ ಸ್ವಾಗತ ಕೋರಲಿದ್ದು, ಡ್ಯಾಮೇಜ್ ಕಂಟ್ರೋಲ್‌ಗೆ ಕರ್ನಾಟಕ ಭವನದ ಅಧಿಕಾರಿಗಳು ಮುಂದಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಮೀಟಿಂಗ್ ಬೆನ್ನಲ್ಲೇ ಕರ್ನಾಟಕ ಭವನ ಆವರಣ ಸ್ವಚ್ಛಗೊಳಿಸಿ, ಸಿಎಂ ಸ್ವಾಗತಕ್ಕೆ ಸಜ್ಜುಗೊಳಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕಸದಲ್ಲೂ ಕಾಸು': ಕಸ ಸಂಸ್ಕರಣೆ ನೆಪದಲ್ಲಿ ₹39,000 ಕೋಟಿ ಹಗರಣ, ₹10,000 ಕೋಟಿ ಕಿಕ್‌ಬ್ಯಾಕ್‌: ಆರ್‌ ಅಶೋಕ ಗಂಭೀರ ಆರೋಪ

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!

ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿದ್ದ 25 ಲಕ್ಷ ರೂ. ಕದ್ದು ಎಸ್ಕೇಪ್ ಆಗುತ್ತಿದ್ದ ಮನೆಗೆಲಸದ ಕಳ್ಳ ದಂಪತಿ ಬಂಧನ!

ದೀರ್ಘಾವಧಿ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾದ ಮೋದಿಗೆ ವಿಶ್ವ ನಾಯಕರಿಂದ ಅಭಿನಂದನೆಗಳ ಮಹಾಪೂರ; ಹೇಳಿದ್ದೇನು?

ಪಶ್ಚಿಮ ಬಂಗಾಳ ಸಚಿವರಿಗೆ ಖಾತೆ ಹಂಚಿಕೆ; ಪತ್ರಕರ್ತರಾಗಿದ್ದ ಸ್ವಪನ್ ದಾಸ್‌ಗುಪ್ತಾಗೆ ಹಣಕಾಸು ಇಲಾಖೆ

SCROLL FOR NEXT