ಆರ್‌ಎಸ್‌ಎಸ್ 
ರಾಜಕೀಯ

ಕಾಂಗ್ರೆಸ್‌ ಸ್ಥಾಪಿಸಿದ್ದು ವಿದೇಶಿಗರು, RSS ಸ್ಥಾಪಿಸಿದ್ದು ಭಾರತೀಯರು; ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ

ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್‌ಎಸ್‌ಎಸ್‌ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ.

ಗದಗ: ಕಾಂಗ್ರೆಸ್ ಪಕ್ಷವನ್ನು ವಿದೇಶಿಗರು ಸ್ಥಾಪಿಸಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್‌ಎಸ್‌ಎಸ್) ಅನ್ನು ಭಾರತೀಯರು ಸ್ಥಾಪಿಸಿದ್ದಾರೆ. ಆರ್‌ಎಸ್‌ಎಸ್‌ಗೆ ಮಾನ್ಯತೆ ನೀಡುವ ಪ್ರಶ್ನೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಗದಗದ ವೀರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್‌ಎಸ್‌ಎಸ್‌ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ" ಎಂದು ಹೇಳಿದರು.

"ನಮ್ಮ ರಾಜಕೀಯ ಸಿದ್ಧಾಂತಗಳು, ಮೌಲ್ಯಗಳು ಮತ್ತು ವಿಚಾರಧಾರೆಗಳು ಆರ್‌ಎಸ್‌ಎಸ್ ಮಾರ್ಗದರ್ಶನದಲ್ಲಿಯೇ ರೂಪುಗೊಂಡಿವೆ. ಆದ್ದರಿಂದ ಆರ್‌ಎಸ್‌ಎಸ್‌ಗೆ ಪ್ರತ್ಯೇಕ ಮಾನ್ಯತೆ ಬೇಕೆಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ" ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿರಂತರ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಐತಿಹಾಸಿಕ ಮೈಲುಗಲ್ಲು ತಲುಪಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು ಎಂದು ಹೇಳಿದರು.

"ಪ್ರಸ್ತುತ ಜಗತ್ತು ಹಲವು ಸಂಕಷ್ಟಗಳನ್ನು ಎದುರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಅಸ್ಥಿರ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಭಾರತವನ್ನು ಮುನ್ನಡೆಸುವ ಶಕ್ತಿ ನರೇಂದ್ರ ಮೋದಿ ಅವರಲ್ಲಿದೆ. ಕಳೆದ ಮೂರು-ನಾಲ್ಕು ತಿಂಗಳುಗಳಲ್ಲಿ ಅವರು ಅದನ್ನು ಸಾಬೀತುಪಡಿಸಿದ್ದಾರೆ.

2047ರ ವೇಳೆಗೆ ಭಾರತವನ್ನು ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಲು ಮೋದಿ ಅವರ ನಾಯಕತ್ವ ಅಗತ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ. ಸಿ. ಪಾಟೀಲ್, ವಿಧಾನ ಪರಿಷತ್ ಸದಸ್ಯಎಸ್. ವಿ. ಸಂಕನೂರು, ಭರತ್ ಬೊಮ್ಮಾಯಿ, ರಾಜು ಕುರುಡಗಿ, ಲಿಂಗರಾಜ ಪಾಟೀಲ್, ಅನಿಲ್ ಅಬ್ಬಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!