ರಾಜ್ಯಸಭೆಗೆ ಆಯ್ಕೆಯಾದ ಅಭ್ಯರ್ಥಿಗಳು 
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ

ಕಾಂಗ್ರೆಸ್‌ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿಯವರು ತಿಳಿಸಿದ್ದಾರೆ.

ಬೆಂಗಳೂರು: ಜೂನ್ 18 ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಒಬ್ಬರು ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯಲು ಬುಧವಾರ ಕಡೆಯ ದಿನವಾದ ಹಿನ್ನೆಲೆಯಲ್ಲಿ ಕಣದಲ್ಲಿದ್ದ ಓರ್ವ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿಯವರು ತಿಳಿಸಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಭೋಸರಾಜು ಸೋಮಯ್ಯ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಸಾ ಬಾಂಡಗೆ ಅವರ ಅಧಿಕಾರ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿತ್ತು. ತೆರವಾದ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ದ್ವೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಕೃಷ್ಣ ಹೆಗಡೆ ನಂತರ ಇದುವರೆಗೂ ಒಂದು ಸರ್ಕಾರ ರಿಪೀಟ್ ಆಗಿಲ್ಲ: 2028ರ ಸೋಲಿನ ಮುನ್ಸೂಚನೆ ಕೊಟ್ರಾ ಸತೀಶ್ ಜಾರಕಿಹೊಳಿ?

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು!

'ನಾನಾ ಅಥವಾ ಅಭಿಷೇಕ್ ಬ್ಯಾನರ್ಜಿನಾ? ಆಯ್ಕೆ ಮಾಡಿ, ಮಮತಾಗೆ ಆಪ್ತನ ಅಂತಿಮ ಎಚ್ಚರಿಕೆ!

ಶ್ರೀಲಂಕಾ ಪ್ರವಾಸಕ್ಕೆ ಅಂಡರ್-19 ಭಾರತ ತಂಡ ಪ್ರಕಟ: ಮಾಜಿ ಕೋಚ್ Rahul Dravid ಪುತ್ರ ಅನ್ವಯ್ ಗೆ ಸ್ಥಾನ!

ಕೊಪ್ಪಳ: ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಕೊಲೆ ಮಾಡಿ, ಸುಟ್ಟು ಹಾಕಿದ ಪ್ರಿಯಕರ!

SCROLL FOR NEXT