ಬಸನಗೌಡ ಪಾಟೀಲ್ ಯತ್ನಾಳ್  
ರಾಜಕೀಯ

'ನಾನು ಬಂಡಾಯಗಾರನೂ ಅಲ್ಲ, ವಿರೋಧಿಯೂ ಅಲ್ಲ': ಪರಿಷತ್ ಚುನಾವಣೆ ಮುನ್ನ ಯತ್ನಾಳ್ ಪತ್ರ ಬರೆದು ಹೀಗೆ ಹೇಳಿದ್ದು ಯಾರಿಗೆ?

ಕಳೆದ ವರ್ಷ ಮಾರ್ಚ್‌ನಲ್ಲಿ, ಭಾರತೀಯ ಜನತಾ ಪಕ್ಷವು ಶಿಸ್ತಿನ ನಿರಂತರ ಉಲ್ಲಂಘನೆಗಳ ಕಾರಣ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿತ್ತು.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುನ್ನ, ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ರಾಜಕೀಯ ನಿಲುವಿನ ಕುರಿತು ಸ್ಪಷ್ಟನೆ ನೀಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಪತ್ರ ಬರೆದಿದ್ದು, “ನಾನು ಬಂಡಾಯಗಾರನೂ ಅಲ್ಲ, ವಿರೋಧಿಯೂ ಅಲ್ಲ” ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ಸ್ಪಷ್ಟಪಡಿಸಲು ಬಿಜೆಪಿ ನಾಯಕ ನಿತಿನ್ ನಬಿನ್ ಅವರಿಗೆ ಪತ್ರ ಬರೆದಿರುವುದಾಗಿ ಯತ್ನಾಳ್ ಹೇಳಿದ್ದಾರೆ. ವಿಜಯಪುರದಿಂದ ಜನರ ಆಶೀರ್ವಾದದಿಂದ ತಾನು ಆಯ್ಕೆಯಾಗಿರುವುದರಿಂದ, ತಾನು ಯಾವುದೇ ರೀತಿಯ ವಿರೋಧಿಯೂ ಅಲ್ಲ, ಬಂಡಾಯಗಾರನೂ ಅಲ್ಲ ಎಂದು ಅವರು ತಿಳಿಸಿದ್ದಾರೆ.

ತಮ್ಮ ನಿರ್ಧಾರವು ಪಕ್ಷಕ್ಕೆ ಮರಳಿ ಸೇರುವ ತಂತ್ರವಲ್ಲ, ಬದಲಾಗಿ ರಾಜಕೀಯ ನೈತಿಕತೆಯ ಆಧಾರದ ಮೇಲೆ ತೆಗೆದುಕೊಂಡ ನಿರ್ಧಾರ ಎಂದು ಅವರು ಒತ್ತಿ ಹೇಳಿದ್ದಾರೆ.

“ನಾನು ಬಿಜೆಪಿಯ ಚಿಹ್ನೆಯಿಂದ ಆಯ್ಕೆಯಾಗಿರುವುದರಿಂದ ಬಿಜೆಪಿಗೆ ಮತ ಹಾಕುವುದು ನನ್ನ ನೈತಿಕ ಕರ್ತವ್ಯ. ಇದು ‘ಕಮ್‌ಬ್ಯಾಕ್’ ಮಾಡಲು ತೆಗೆದುಕೊಂಡ ಕ್ರಮವಲ್ಲ,” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಮಾರ್ಚ್‌ನಲ್ಲಿ, ಭಾರತೀಯ ಜನತಾ ಪಕ್ಷವು ಶಿಸ್ತಿನ ನಿರಂತರ ಉಲ್ಲಂಘನೆಗಳ ಕಾರಣ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿತ್ತು. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಹಿಂದಿನ ಎಚ್ಚರಿಕೆಗಳಿದ್ದರೂ ಅವರು ಪಕ್ಷದ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿತ್ತು.

ಈ ಬೆಳವಣಿಗೆ ರಾಜ್ಯ ಬಿಜೆಪಿ ಒಳರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯದ ದರ್ಬಾರು: ಡಿಕೆಶಿ ಸಂಪುಟದಲ್ಲಿಯೂ 2ನೇ ತಲೆಮಾರಿನ ನಾಯಕರ ಕಾರುಬಾರು; ಸಾಮರ್ಥ್ಯಕ್ಕಿಂತ ಸಂಪರ್ಕ ಮುಖ್ಯವೇ?

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್