ಬಿಜೆಪಿಯಿಂದ ತನಿಖಾ ತಂಡ ರಚನೆ  
ರಾಜಕೀಯ

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ: ತನಿಖೆಗೆ ಸತ್ಯಶೋಧನಾ ಸಮಿತಿ ರಚನೆ

ಬಿಜೆಪಿ– ಜೆಡಿಎಸ್‌ ಶಾಸಕರ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್‌ಗೆ ಹೆಚ್ಚುವರಿಯಾಗಿ 11 ಮತಗಳು ಬಂದಿದ್ದು ಮೈತ್ರಿಗೆ ಸೋಲು ಮತ್ತು ತೀವ್ರ ಮುಜುಗರ ಉಂಟಾಗಿದೆ.

ಬೆಂಗಳೂರು: ನಿನ್ನೆ ನಡೆದ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ ನಡೆದಿದ್ದಕ್ಕೆ ಹೈಕಮಾಂಡ್‌ ನಾಯಕರು ರಾಜ್ಯಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದು ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ– ಜೆಡಿಎಸ್‌ ಶಾಸಕರ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್‌ಗೆ ಹೆಚ್ಚುವರಿಯಾಗಿ 11 ಮತಗಳು ಬಂದಿದ್ದು ಮೈತ್ರಿಗೆ ಸೋಲು ಮತ್ತು ತೀವ್ರ ಮುಜುಗರ ಉಂಟಾಗಿದೆ.ಇದು ಮುಂದಿನ ದಿನಗಳಲ್ಲಿ ಮೈತ್ರಿ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದ್ದು, ಬಿಜೆಪಿ ಅಡ್ಡ ಮತದಾನ ಮಾಡಿದ್ದಕ್ಕೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಕೆಂಡಾಮಂಡಲವಾಗಿದ್ದು ವರದಿ ನೀಡುವಂತೆ ಸೂಚಿಸಿದೆ.

ಸಮಿತಿ ರಚನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಇದರ ತನಿಖೆಗಾಗಿ ಹಾಗೂ ತಪ್ಪಿತಸ್ಥರನ್ನು ಗುರುತಿಸಲು ಸಿ.ಟಿ. ರವಿ, ಎನ್. ಮಹೇಶ್ ಮತ್ತು ಮಹೇಶ್ ಟೆಂಗಿನಕಾಯಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿದೆ.

ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಶಾಸಕರು ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನುಂಟುಮಾಡಿದೆ. ಪಕ್ಷದ ನಿರೀಕ್ಷೆಯಂತೆ ಮತಗಳು ಬೀಳದೆ, 4 ರಿಂದ 5 ಬಿಜೆಪಿ ಶಾಸಕರು ಮತ್ತು 6 ರಿಂದ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಹೈಕಮಾಂಡ್ ಗೆ ವರದಿ

ಈ ಅಡ್ಡ ಮತದಾನದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಯಾರ್ಯಾರು ಪಕ್ಷದ ಆದೇಶ ಉಲ್ಲಂಘಿಸಿದ್ದಾರೆ ಎಂಬ ಬಗ್ಗೆ ವರದಿ ನೀಡಲು ಹಿರಿಯ ನಾಯಕರ ತಂಡವನ್ನು ರಚಿಸಲಾಗಿದೆ. ರಾಜ್ಯ ನಾಯಕರು ಈ ಅಡ್ಡ ಮತದಾನದ ವಿಷಯದ ಬಗ್ಗೆ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್‌ಗೆ ಸಮಗ್ರ ವರದಿಯನ್ನು ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!