ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷ ಸಭೆಗೆ ನಿರ್ಧಾರ  
ರಾಜಕೀಯ

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಬಿಜೆಪಿ ನಿರ್ಧಾರ; ಶೀಘ್ರ ಶಾಸಕಾಂಗ ಪಕ್ಷ ಸಭೆ; Video

ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಈ ವಾರ ಅಥವಾ ಮುಂದಿನ ವಾರ ಸಭೆ ನಡೆಯುವ ನಿರೀಕ್ಷೆಯಿದೆ.

ಬೆಂಗಳೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಈ ವಾರ ಅಥವಾ ಮುಂದಿನ ವಾರ ಸಭೆ ನಡೆಯುವ ನಿರೀಕ್ಷೆಯಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿರುವ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಚುನಾವಣೆಯಲ್ಲಿ‌ ನಮ್ಮಿಂದ 4 ಅಡ್ಡ ಮತದಾನ ಆಗಿದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ.

ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ. ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ ಎಂದವರು ತಿಳಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಗೆ ಯಾರೊಬ್ಬರೂ ಗೈರಾಗದಂತೆ ತಡೆಯಲು ಎಲ್ಲ ಶಾಸಕರಿಗೂ ಅಧಿಕೃತ ‘ವಿಪ್’ (Whip) ಜಾರಿ ಮಾಡಲು ನಿರ್ಧರಿಸಲಾಗಿದೆ. ಆರ್. ಅಶೋಕ್ ಅವರು ಎಲ್ಲ ಶಾಸಕರಿಗೂ ವಿಪ್ ಕೊಡಿಸುವ ಮೂಲಕ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ನೀಡಲಿದ್ದಾರೆ.

ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ನಿಂದ ಒಟ್ಟು 11 ಮತಗಳು ಕ್ರಾಸ್​​ ವೋಟಿಂಗ್​​ ಆಗಿತ್ತು. ಹೀಗಾಗಿ ಜೆಡಿಎಸ್​​ ಅಭ್ಯರ್ಥಿ ಸೋಲುಂಡಿದ್ದರೆ, ಬಿಜೆಪಿಯ ಎರಡು ಅಭ್ಯರ್ಥಿಗಳ ಪೈಕಿ ಓರ್ವ ಅಭ್ಯರ್ಥಿ ಪ್ರಯಾಸದಲ್ಲಿ ಗೆಲುವು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

ರಷ್ಯಾ ಸಂಸತ್ ಚುನಾವಣೆ: 355ಕ್ಕೂ ಹೆಚ್ಚು ಸ್ಥಾನ ಗೆದ್ದ ಪುಟಿನ್ ಪಕ್ಷ; ಹೊಸ ಇತಿಹಾಸ ಸೃಷ್ಟಿ!

Video: ಮಿಲ್ಕ್ ಟ್ಯಾಂಕರ್ ಪಲ್ಟಿ; ಹೆದ್ದಾರಿಯಲ್ಲಿ ಹಾಲಿನ ಹೊಳೆ, ಕ್ಯಾನ್​ ಹಿಡಿದು ಮುಗಿಬಿದ್ದ ಜನ!

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ- ರಾಹುಲ್ ಗಾಂಧಿ