ಕೆಎಸ್ ಈಶ್ವರಪ್ಪ TNIE
ರಾಜಕೀಯ

Cross-voting: ದುಡ್ಡು ಕೊಟ್ಟು ಕರೆತಂದ ಕಾಂಗ್ರೆಸ್‌ ಶಾಸಕರಿಂದಲೇ BJP ಹಾಳಾಯ್ತು; ಈಶ್ವರಪ್ಪ ಸ್ಫೋಟಕ ಹೇಳಿಕೆ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ನಂತರ ಅವರಿಂದಲೇ ಪಕ್ಷ ಹಾಳಾಯ್ತು. ಕಾಂಗ್ರೆಸ್‌ಗೂ ಅದೇ ಪರಿಸ್ಥಿತಿ ಬರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌ ಈಶ್ವರಪ್ಪ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.

ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ ಬರಬೇಕು ಎಂದರು.

ಇನ್ನು ಧರ್ಮಸ್ಥಳದಲ್ಲಿ ಆಣೆ - ಪ್ರಮಾಣ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಡಳಿತ ಪಕ್ಷ, ವಿರೋಧ ಪಕ್ಷ ರಾಜ್ಯದ ಅಭಿವೃದ್ದಿ ಬಗ್ಗೆ ಮಾತಾಡಬೇಕಿತ್ತು ಎಂದರು.

ಧರ್ಮಸ್ಥಳ ಪವಿತ್ರವಾದ ಸ್ಥಳ, ಅಲ್ಲಿ ಆಣೆ ಪ್ರಮಾಣ ಬೇಡ. ವಿಜಯೇಂದ್ರ ಅವರು ತಕ್ಷಣ ತಮ್ಮ ನಿಲುವನ್ನ ಹಿಂಪಡೆಯಬೇಕು. ಭಕ್ತಿಯನ್ನ ಒರೆ ಹಚ್ಚುವುದಲ್ಲ, ಹಾಗಾಗಿ ಈ ನಿರ್ಧಾರ ಕೈಬಿಡಬೇಕು. ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿ ಅಣ್ಣಪ್ಪನ ಬಳಿ ಬಂದು ಕ್ಷಮೆ ಕೇಳ್ತಾರೆ. ಈ ಪದ್ಧತಿ ಒಳ್ಳೆಯದಲ್ಲ. ಇದು ನನ್ನ ಸಲಹೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಸೆಲ್ಫಿ ಕೇಳಿ ಬಂದ ಮಹಿಳಾ ಅಭಿಯಾನಿಯಿಂದ 'ಲಿಪ್ ಲಾಕ್': ತಬ್ಬಿಬ್ಬಾದ ಬಾಲಿವುಡ್ ನಟಿ ನಿಕಿತಾ ರಾವಲ್, Video ವೈರಲ್

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?