ಸುಹಾಸ್ ಸುಧಾಕರ್ 
ರಾಜಕೀಯ

ಹಿರಿಯೂರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಧಾಕರ್ ಪತ್ನಿ ಹಿಂದೇಟು: ರಾಜಕೀಯ ಅಖಾಡ ಪ್ರವೇಶಕ್ಕೆ ಪುತ್ರ ಸಜ್ಜು!

ಹಿರಿಯೂರು ಮುಂಬರುವ ತಿಂಗಳುಗಳಲ್ಲಿ ಉಪಚುನಾವಣೆ ಎದುರಿಸುವ ಸಾಧ್ಯತೆ ಇದೆ. ತಂದೆ ಸಚಿವರಾಗಿದ್ದಾಗ ಅವರ ಜೊತೆ ವಿರಳವಾಗಿ ಕಾಣಿಸಿಕೊಂಡಿದ್ದರೂ, ಸುಹಾಸ್ ಈಗ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ.

ಬೆಂಗಳೂರು: ಕಳೆದ ತಿಂಗಳು ನಿಧನರಾದ ಶಾಸಕರಾಗಿದ್ದ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ಸಜ್ಜಾಗುತ್ತಿದ್ದಾರೆ.

ಹಿರಿಯೂರು ಮುಂಬರುವ ತಿಂಗಳುಗಳಲ್ಲಿ ಉಪಚುನಾವಣೆ ಎದುರಿಸುವ ಸಾಧ್ಯತೆ ಇದೆ.ತಂದೆ ಸಚಿವರಾಗಿದ್ದಾಗ ಅವರ ಜೊತೆ ವಿರಳವಾಗಿ ಕಾಣಿಸಿಕೊಂಡಿದ್ದರೂ, ಸುಹಾಸ್ ಈಗ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ.

ಮೃತ ಶಾಸಕರ ಕುಟುಂಬ ಸದಸ್ಯರನ್ನು ಉಪಚುನಾವಣೆಯಲ್ಲಿ ಕಣಕ್ಕಿಳಿಸುವುದು ಸಾಮಾನ್ಯ ರಾಜಕೀಯ ತಂತ್ರ ಎಂದು ಮೂಲಗಳು ತಿಳಿಸಿವೆ. ಸುಹಾಸ್ ತಮ್ಮ ತಂದೆಯ ಬೆಂಬಲಿಗರು ಮತ್ತು ಕ್ಷೇತ್ರದ ಸ್ಥಳೀಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

ಪಕ್ಷದ ನಾಯಕರು ಸುಧಾಕರ್ ಅವರ ಪತ್ನಿ ಹರ್ಷಿಣಿ ಅನುಕಂಪದ ಮತಗಳನ್ನು ಸೆಳೆಯಬಹುದೆಂದು ನಂಬಿದ್ದಾರೆ, ಆದರೆ ಹರ್ಷಿಣಿ ಸ್ಪರ್ಧಿಸಲು ಹಿಂಜರಿಯುತ್ತಿದ್ದಾರೆ ಎಂದು ವರದಿಯಾಗಿದೆ.

ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!