ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು

ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ.

ಬೆಂಗಳೂರು: ನಮ್ಮ ಜಿಲ್ಲೆಗೆ ಬಂದು ಶಾಸಕರ, ಸಂಸದ, ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಹುದ್ದೆಗೇರಿದವರು ಅಭಿವೃದ್ಧಿಯ ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ. ದೇವೇಗೌಡ ಅವರಿಗೆ ಸವಾಲು ಹಾಕಿದ್ದಾರೆ.

ಮಾಗಡಿಯ ಚಕ್ರಬಾವಿಯಲ್ಲಿ ನಡೆದ ವೈ.ಜಿ.ಗುಡ್ಡ ಏತನೀರಾವರಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ನಮ್ಮ ಜಿಲ್ಲೆಗೆ ಬಂದು ದೊಡ್ಡ ಸ್ಥಾನಕ್ಕೆ ಹೋಗಿ ಏನೂ ಮಾಡದವರು, ಈಗ ಬುಡುಬುಡುಕೆ ಆಡಿಸುತ್ತಾ ಬಣ್ಣದ ಮಾತುಗಳನ್ನಾಡುತ್ತಿದ್ದಾರೆ. ಚುನಾವಣೆ ಬಂದಾಗ ಕಣ್ಣೀರು ಹಾಕುತ್ತಾರೆಂದು ಟೀಕಿಸಿದರು.

ಬರಡು ಭೂಮಿ ಮಾಗಡಿಗೆ ನಾವು ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದ ನೀರನ್ನು ತರುತ್ತಿದ್ದೇವೆ. ರೈತರ ಮಕ್ಕಳು ಮತ್ತು ಮಣ್ಣಿನ ಮಕ್ಕಳು ಎನಿಸಿಕೊಂಡವರು ಯಾಕೆ ಇಂತಹ ಒಂದೇ ಒಂದು ಯೋಜನೆ ಮಾಡಲಿಲ್ಲ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರನ್ನು ಕೇಳಬೇಕು ಎಂದು ತಿಳಿಸಿದರು.

ರೈತರ ಪಂಪ್ ಸೆಟ್‍ಗಳಿಗೆ 10 ಎಚ್‍ಪಿ ಉಚಿತ ವಿದ್ಯುತ್ ನೀಡಿದ್ದು ಕಾಂಗ್ರೆಸ್ ಸರಕಾರ. ರಾಜ್ಯದ 2.20 ಲಕ್ಷ ಜನರಿಗೆ ಆಸ್ತಿ ದಾಖಲೆ ನೀಡುವ ಮೂಲಕ ಭೂಮಿ ಗ್ಯಾರಂಟಿ ನೀಡಿದ್ದೇವೆ. ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್ ನಿಮ್ಮ ಅವಧಿಯಲ್ಲಿ, ಜನತಾ ದಳದ ಅವಧಿಯಲ್ಲಿ ಇಂತಹ ಕೆಲಸ ಮಾಡಲು ಆಗುತ್ತಿರಲಿಲ್ಲವೇ? ಉಳುವವನಿಗೆ ಭೂಮಿ, ಬಗರ್ ಹುಕ್ಕುಂ, ಅರಣ್ಯ ಭಾಗದ ರೈತರಿಗೆ ಜಮೀನು ಸೇರಿದಂತೆ ರೈತರ ಪರವಾಗಿ ಹೊಸದಿಲ್ಲಿಯಲ್ಲಾದರೂ ಸರಿ, ರಾಜ್ಯದಲ್ಲಾದರೂ ಸರಿ ಯೋಜನೆ ರೂಪಿಸಿದ್ದರೆ ಅದು ಕಾಂಗ್ರೆಸ್ ಮಾತ್ರ. ಇಂತಹ ಒಂದೇ ಒಂದು ಕೆಲಸ ಮಾಡಲು ಆಗದಿದ್ದರೆ ಮತ್ತೆ ಏಕೆ ಜನ ಮತ ಹಾಕಬೇಕು? ಎಂದು ಪ್ರಶ್ನಿಸಿದರು.

ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ. ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ. ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ ಎಂದು ಅವರು ತಿಳಿಸಿದರು.

ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಮತಕ್ಕಾಗಿ ಬಂದಾಗ ಯಾರು ಏನು ಮಾಡಿದ್ದಾರೆ ಎಂದು ಕೇಳಬೇಕು. ಕಾಂಗ್ರೆಸ್ ಕಾರ್ಯಕರ್ತರು ನೀವುಗಳು ಬೇರೆ ಪಕ್ಷಗಳ ನಿಮ್ಮ ಸ್ನೇಹಿತರ ಜತೆ ಯಾರ ಕಾಲದಲ್ಲಿ ಯಾವ ಕೆಲಸ ಆಗಿದೆ ಎಂದು ಲೆಕ್ಕಾಚಾರ ಹಾಕಬೇಕು. ಅಧಿಕಾರ ಯಾರಿಗೆ ಇರಲಿಲ್ಲ? ಜೆಡಿಎಸ್ ಪಕ್ಷದ ಮುಖ್ಯಮಂತ್ರಿ, ಪ್ರಧಾನಿ ಆಗಿದ್ದ ವೇಳೆ ಎಲ್ಲರಿಗೂ ಅಧಿಕಾರ ಇತ್ತಲ್ಲವೇ? ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ? ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!