ಮೈಸೂರು: ಹೈ ಕಮಾಂಡ್ ಇರು ಎಂದರೆ ಇರುತ್ತೇನೆ, ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಎಲ್ಲವೂ ಹೈ ಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರೋ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈ ಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ' ಎಂದರು.
ಮೈಸೂರಿನ ಜನರಷ್ಟೇ ಅಲ್ಲ, ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್' ಎಂದರು. ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ಈ ವಿಷಯದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹೇಳಿಕೆ ಮಹತ್ವ ಪಡೆದುಕೊಂಡಿದೆ.