ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ. 
ರಾಜಕೀಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಪರಿಹಾರ..?

ಮಾರ್ಚ್ 27ರಂದು ಅಧಿವೇಶನ ಮುಕ್ತಾಯವಾದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರ ಕುರಿತ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಜಕೀಯ ಚರ್ಚೆಗಳು ಜೋರಾಗಿವೆ.

ಮಾರ್ಚ್ 27ರಂದು ಅಧಿವೇಶನ ಮುಕ್ತಾಯವಾದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರ ಕುರಿತ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪಕ್ಷದ ಉನ್ನತ ನಾಯಕತ್ವವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಆರು ವರ್ಷಗಳ ಕಾಲ ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವುದನ್ನು ಗುರುತಿಸಿ ಶಾಸಕರಿಗೆ ಔತಣ ಕೂಟ ನೀಡಿದ ಡಿಕೆ.ಶಿವಕುಮಾರ್ ಅವರು, ಹೈಕಮಾಂಡ್ ಸೂಚನೆ ನೀಡಿದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ತಿಳಿಸಿದ್ದು, ಈ ಹೇಳಿಕೆ ಕುತೂಹಲವನ್ನು ಮೂಡಿಸಿದೆ.

ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಚರ್ಚೆಗಳು ನಡೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಸಚಿವ ಸಂಪುಟ ಪುನರ್‌ರಚನೆಗೆ ಉನ್ನತ ನಾಯಕತ್ವದ ಅನುಮತಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದಲ್ಲೇ ಬದಲಾವಣೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಸುಮಾರು 25–30 ಹಿರಿಯ ಕಾಂಗ್ರೆಸ್ ಶಾಸಕರು ಗುರುವಾರ ಸಂಜೆ ಭೋಜನ ಕೂಟದಲ್ಲಿ ಸಭೆ ಸೇರಿ ಸಂಪುಟ ಸ್ಥಾನಕ್ಕಾಗಿ ಹಕ್ಕು ಮಂಡಿಸಲಿದ್ದಾರೆಂದು ತಿಳಿದುಬಂದಿದೆ.

ಮೊದಲ ಬಾರಿಗೆ ಶಾಸಕರಾದವರು ಸಂಪುಟದಲ್ಲಿ ಸೇರ್ಪಡೆಯಾಗವು ಲಾಬಿ ನಡೆಸುತ್ತಿದ್ದಾರೆ. ಅವರಿಗೆ ಸಾಧ್ಯವಾಗುವುದಾದರೆ, 3-4 ಬಾರಿ ಗೆದ್ದಿರುವ ನಮಗೇಕೆ ಹಕ್ಕು ಮಂಡಿಸಲು ಸಾಧ್ಯವಿಲ್ಲ? ನಾವು ಇದನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ತಿಳಿಸುತ್ತೇವೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತೇವೆ ಎಂದು ಬೇಲೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ಸಸ್ಪೆನ್ಸ್ ಗೆ ಕೊನೆಗೂ ಬಿತ್ತು ತೆರೆ: ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆ

Video: ಇಂಧನ ಉಳಿಸಲು ಬುಲೆಟ್ ಏರಿ ಬಂದ ಮಹಾ ಸಿಎಂ ಫಡ್ನವೀಸ್; ನಡೆದುಕೊಂಡೇ ಬಂದ ಸಚಿವ ರಾಣೆ!

IPL 2026: ಕಳಪೆ ಪ್ರದರ್ಶನ, ಮೂರು ನಾಯಕರ ಮೇಲೆ 'ಗೇಟ್ ಪಾಸ್' ತೂಗುಗತ್ತಿ, ಸಂಚಲನಕಾರಿ ವರದಿ ಬಹಿರಂಗ

ವೇಣುಗೋಪಾಲ್, ಚೆನ್ನಿತ್ತಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ: ಕೇರಳ ನಿಯೋಜಿತ ಸಿಎಂ ಸತೀಶನ್

Chumrah: ಬೂಮ್ರಾ ಕಂಡ್ರೆ ಸೆಹ್ವಾಗ್ ಗೆ ಯಾಕಿಷ್ಟು ದ್ವೇಷ? ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್! Video

SCROLL FOR NEXT