ಬಿ ವೈ ವಿಜಯೇಂದ್ರ  
ರಾಜಕೀಯ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ: ವಿಜಯೇಂದ್ರ

ಸಭೆಯಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮುಂಬರುವ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಬಿಜೆಪಿ ಕರ್ನಾಟಕ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಸಭೆಯಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, "ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮುಂಬರುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು" ಎಂದರು.

ಎರಡು ಕ್ಷೇತ್ರಗಳಲ್ಲಿ ಪಕ್ಷದ ಟಿಕೆಟ್ ಬಯಸುತ್ತಿರುವ ವಿವಿಧ ನಾಯಕರ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ ಮತ್ತು ಸಭೆಯಲ್ಲಿ ಪರಿಗಣಿಸಲಾದ ಹೆಸರುಗಳನ್ನು ಅಂತಿಮ ನಿರ್ಧಾರಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ರವಾನಿಸಲಾಗುವುದು ಎಂದು ಅವರು ಹೇಳಿದರು.

ಮುಂಬರುವ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷ ಸಾಮೂಹಿಕವಾಗಿ ಕೆಲಸ ಮಾಡಲು ನಿರ್ಧರಿಸಿದೆ ಎಂದು ಶಿಕಾರಿಪುರ ಬಿಜೆಪಿ ಶಾಸಕ ತಿಳಿಸಿದ್ದಾರೆ.

"ಹಿಂದಿನ ಭಿನ್ನಾಭಿಪ್ರಾಯಗಳನ್ನು ಮರೆತು, ಎಲ್ಲಾ ಸಮಸ್ಯೆಗಳನ್ನು ಬದಿಗಿಟ್ಟು, ಚುನಾವಣೆಯಲ್ಲಿ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ನಾವು ಎಲ್ಲರಿಗೂ ಕೇಳಿಕೊಂಡಿದ್ದೇವೆ" ಎಂದು ಅವರು ಹೇಳಿದರು.

ದಾವಣಗೆರೆಯಲ್ಲಿ ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎದುರಿಸಿದ ಸಮಸ್ಯೆಗಳನ್ನು ಉಲ್ಲೇಖಿಸಿದ ಅವರು, ಪರಿಸ್ಥಿತಿ ಪುನರಾವರ್ತನೆಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

"ಇಂತಹ ಪರಿಸ್ಥಿತಿ ಮತ್ತೆ ಉದ್ಭವಿಸದಂತೆ ನೋಡಿಕೊಳ್ಳಲು, ನಾವು ಇಂದು ಎರಡೂ ಕಡೆಯ ನಾಯಕರನ್ನು ಒಟ್ಟುಗೂಡಿಸಿ ಚರ್ಚೆ ನಡೆಸಿದ್ದೇವೆ. ಎಲ್ಲವೂ ಬಗೆಹರಿಯುತ್ತದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನ ಎರಡೂ ಸದನಗಳಲ್ಲಿ CEC ಜ್ಞಾನೇಶ್ ಕುಮಾರ್ ಪದಚ್ಯುತಿ ಕೋರಿ ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಗೆ ಅಭಾವ ಉಂಟಾಗಿದೆಯಾ? IOCL ಹೇಳಿದ್ದೇನು

ಪಾಕಿಸ್ತಾನ ಮೇಲೆ ಅಫ್ಘಾನಿಸ್ತಾನದಿಂದ ಪ್ರತೀಕಾರದ ಡ್ರೋನ್ ದಾಳಿ

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

SCROLL FOR NEXT