ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ 
ರಾಜಕೀಯ

ಸಿಎಂ-ಡಿಸಿಎಂ ನಂತರ 48 ಕಾಂಗ್ರೆಸ್ ಶಾಸಕರಿಂದ ಡಿನ್ನರ್ ಮೀಟಿಂಗ್: ಸಚಿವ ಸ್ಥಾನಕ್ಕೆ ಬೇಡಿಕೆಯಿಡಲು ಕಾರ್ಯತಂತ್ರ ಚರ್ಚೆ

ಕಾಂಗ್ರೆಸ್ ನಲ್ಲಿ ಮೊದಲು ಮತ್ತು ಎರಡನೇ ಬಾರಿ ಆಯ್ಕೆಯಾದ ಶಾಸಕರಿಂದ ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಔತಣಕೂಟ ಸಭೆ ನಡೆದಿದೆ. 48 ಶಾಸಕರು ಈ ಡಿನ್ನರ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನಲ್ಲಿ ಬಜೆಟ್ ಅಧಿವೇಶನ ನಂತರ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳ ನಡುವೆ ಕಾಂಗ್ರೆಸ್ ನಲ್ಲಿ ಮೊದಲು ಮತ್ತು ಎರಡನೇ ಬಾರಿ ಆಯ್ಕೆಯಾದ ಶಾಸಕರಿಂದ ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಔತಣಕೂಟ ಸಭೆ ನಡೆದಿದೆ. 48 ಶಾಸಕರು ಈ ಡಿನ್ನರ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯರನ್ನು ವಿಧಾನಸಭೆ ಚೇಂಬರ್​ನಲ್ಲಿ ಭೇಟಿಯಾದ ಹಿರಿಯ ಕೈ ಶಾಸಕರು ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಸುಮಾರು 16 ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟರು.‌ ಮೂರು ನಾಲ್ಕು ಬಾರಿ ಗೆದ್ದ ಶಾಸಕರು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು.‌

ಸಚಿವ ಸಂಪುಟ ಪುನಾರಚನೆ ವೇಳೆ ನಮ್ಮನ್ನು ಪರಿಗಣಿಸಿ. ಕ್ಯಾಬಿನೆಟ್​ನಲ್ಲಿ ನಮಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.‌

ಈಗಾಗಾಲೇ ಕಿರಿಯ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ಪುನಾರಚನೆ ವೇಳೆ ತಮಗೆ ಸಚಿವ ಸ್ಥಾನ ನೀಡುವಂತೆ ಕೋರಿ ಹೈಕಮಾಂಡ್​ಗೆ ಪತ್ರ ಬರೆದಿದ್ದರು. ಇದೀಗ ಹಿರಿಯ ಶಾಸಕರು ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.‌ ಉಪ ಚುನಾವಣೆ ಮುಗಿದ ಬಳಿಕ ದೆಹಲಿಗೆ ಹೋಗಿ ಹೈಕಮಾಂಡ್ ಗಮನಕ್ಕೆ ತರುವುದಾಗಿ ಸಿಎಂ ಭರವಸೆ ನೀಡಿದರು. ನೀವು ಹೈಕಮಾಂಡ್ ನಾಯಕರ ಭೇಟಿ ಮಾಡಿ ಮನವಿ ಸಲ್ಲಿಸಿ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ಸಂಪುಟದಲ್ಲಿ ನಮಗೂ ಅವಕಾಶ ಕೊಡಿ

ಸಿಎಂ ಸಿದ್ದರಾಮಯ್ಯನವರು ಸಚಿವ ಸಂಪುಟ ಪುನಾರಚನೆ ಮಾಡುವ ವೇಳೆ ಮೊದಲ ಮತ್ತು ಎರಡನೇ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಒತ್ತಡ ಹೇರುವ ಕುರಿತು ಕಾರ್ಯತಂತ್ರ ಹೆಣೆಯಲು ಸಭೆಯಲ್ಲಿ ಚರ್ಚಿಸಿದರು ಎಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶಕ್ಕೆ ಒತ್ತಾಯಿಸಲು ಕೈ ಶಾಸಕರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!