ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಗೆಲ್ಲುವ ಸಾಧ್ಯತೆಯನ್ನು ಹೊರತುಪಡಿಸಿ ಬೇರೆ ಯಾವುದೇ ಮಾನದಂಡಗಳನ್ನು ಆಡಳಿತಾರೂಢ ಕಾಂಗ್ರೆಸ್ ಪರಿಗಣಿಸುತ್ತಿಲ್ಲ.
ಶಾಮನೂರು ಶಿವಶಂಕರಪ್ಪ ಮತ್ತು ಎಚ್‌ವೈ ಮೇಟಿ ಅವರ ನಿಧನದ ನಂತರ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ನಡೆಯುತ್ತಿದೆ. ಈಗಾಗಲೇ ತೋಟಗಾರಿಕೆ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ.
ಮೇಟಿ ಅವರ ಪುತ್ರ ವಕೀಲ ಉಮೇಶ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಹೇಳಲಾಗಿದೆ.ಆದರೆ ಮುಸ್ಲಿಂ ನಾಯಕರು ತಮ್ಮ ಸಮುದಾಯದ ಸದಸ್ಯರನ್ನು ಆಯ್ಕೆ ಮಾಡದಿದ್ದರೆ ತಾವು ಬಂಡಾಯವೇಳುವುದಾಗಿ ಬೆದರಿಕೆ ಹಾಕಿದ್ದಾರೆ.
ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರೊಂದಿಗೆ ಸಭೆ ನಡೆಸಿದರು.
ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಹ ಸಭೆಯಲ್ಲಿ ಭಾಗವಹಿಸಿದ್ದರು. ವಿಮಾನ ನಿಲ್ದಾಣದಲ್ಲಿ ಸುರ್ಜೇವಾಲಾ ಅವರನ್ನು ಬರಮಾಡಿಕೊಳ್ಳುವಾಗ, ಈಶ್ವರ್ ಖಂಡ್ರೆ ಸಮರ್ಥ್ ಸ್ಪರ್ಧೆಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಸಮರ್ಥ್ ಅವರ ನಾಮಪತ್ರ ಸಲ್ಲಿಸುವ ಸುದ್ದಿ ತಿಳಿದ ಮುಸ್ಲಿಂ ನಾಯಕರು ಟಿಕೆಟ್ ಗಾಗಿ ಒತ್ತಡ ತಂತ್ರ ಆರಂಭಿಸಿದ್ದಾರೆ.
ವಸತಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ತಂಡವು ಪಕ್ಷವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಸುರ್ಜೇವಾಲಾ ಅವರಿಗೆ ಒತ್ತಾಯಿಸಿದರು. ಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಸಚಿವ ರಹೀಮ್ ಖಾನ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಇತರರು ಹಾಜರಿದ್ದರು.
ಅದಾದ ನಂತರ, ಸಿದ್ದರಾಮಯ್ಯ ಅವರನ್ನು ತಮ್ಮ ಅಧಿಕೃತ ನಿವಾಸ ಕಾವೇರಿಗೆ ಕರೆಸಿ ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮನವೊಲಿಸಿದರು ಎಂದು ಮೂಲಗಳು ತಿಳಿಸಿವೆ.
ಬಾಗಲಕೋಟೆಗೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಿದ್ದರಾಮಯ್ಯ ಅವರು ಮೇಟಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಉಮೇಶ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಮೇಟಿಯವರ ಪುತ್ರಿಯರಾದ ಮಹಾದೇವಿ ಮತ್ತು ಬಯಕ್ಕ ಮತ್ತು ಮಗ ಮಲ್ಲಿಕಾರ್ಜುನ್ ಅವರ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡುವ ಮೂಲಕ ಅಸಿದ್ದರಾಮಯ್ಯ ಮನವೊಲಿಸಿದರು ಎಂದು ಮೂಲಗಳು TNIE ಗೆ ತಿಳಿಸಿವೆ.
ನೀವು (ಮಾಧ್ಯಮ) ಮತ್ತು ಎಲ್ಲರೂ ಹಿಂದೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದೀರಿ... ಆದರೆ ನಾವು ಗೆದ್ದಿದ್ದೇವೆ... ಏಕೆಂದರೆ ಕರ್ನಾಟಕದ ಜನರು ಮತ್ತು ಬಡವರು ನಮ್ಮೊಂದಿಗಿದ್ದಾರೆ. ಕರ್ನಾಟಕದ ಸಹೋದರ ಸಹೋದರಿಯರ ಆಶೀರ್ವಾದದೊಂದಿಗೆ ನಾವು ಮತ್ತೆ ಎರಡು ಸ್ಥಾನಗಳನ್ನು ಗೆಲ್ಲಲಿದ್ದೇವೆ" ಎಂದು ಸುರ್ಜೆವಾಲ ಹೇಳಿದರು.
ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಿದೆ. ಪ್ರತಿಯೊಬ್ಬ ಕಾರ್ಯಕರ್ತ, ಪ್ರತಿಯೊಬ್ಬ ಕಾಂಗ್ರೆಸ್ ನಾಯಕರಿಗೂ ತಮ್ಮ ಆಕಾಂಕ್ಷೆಗಳು, ಬೇಡಿಕೆಗಳು ಮತ್ತು ಭರವಸೆಯನ್ನು ವ್ಯಕ್ತಪಡಿಸುವ ಹಕ್ಕಿದೆ.
ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಭಾರತವು ದೊಡ್ಡ ಬಿಕ್ಕಟ್ಟಿನಲ್ಲಿದೆ ಮತ್ತು ಜನರು ಎದುರು ನೋಡುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್" ಎಂದು ಅವರು ವಿವರಿಸಿದರು.