ಪಕ್ಷದ ಮುಖಂಡರೊಂದಿಗೆ ಸುರ್ಜೇವಾಲಾ ಸಭೆ 
ರಾಜಕೀಯ

ಉಪ ಚುನಾವಣೆ: ಕಾಂಗ್ರೆಸ್ ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ನಾಳೆಯೊಳಗೆ ಹೆಸರು ಅಂತಿಮ- ಸುರ್ಜೇವಾಲಾ

ಏಪ್ರಿಲ್ 9 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ತೀವ್ರ ಲಾಬಿ ಮುಂದುವರೆದಿದ್ದು, ಆಕಾಂಕ್ಷಿಗಳು ಮತ್ತು ಸಮುದಾಯದ ಮುಖಂಡರು ವರಿಷ್ಠರ ಮೇಲೆ ಹೆಚ್ಚಿನ ಒತ್ತಡ ಹೇರುತ್ತಿದ್ದಾರೆ.

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಆಗಿರುವಂತೆಯೇ ನಾಳೆಯೊಳಗೆ ಹೆಸರು ಅಂತಿಮಗೊಳುವ ಸಾಧ್ಯತೆಯಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ವಿವಿಧ ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮಾರ್ಚ್ 22 ರ ನಂತರ ಟಿಕೆಟ್ ಹಂಚಿಕೆಯ ಬಗ್ಗೆ ನಿರ್ಧಾರವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 9 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ತೀವ್ರ ಲಾಬಿ ಮುಂದುವರೆದಿದ್ದು, ಆಕಾಂಕ್ಷಿಗಳು ಮತ್ತು ಸಮುದಾಯದ ಮುಖಂಡರು ವರಿಷ್ಠರ ಮೇಲೆ ಹೆಚ್ಚಿನ ಒತ್ತಡ ಹೇರುತ್ತಿದ್ದಾರೆ.

ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸುರ್ಜೇವಾಲಾ, ಇಂದು ರಾತ್ರಿ ಅಥವಾ ನಾಳೆಯೊಳಗೆ ಮಾಡಲಾಗುವುದು. ಸಮಗ್ರ ಚರ್ಚೆಗೆ ಪಕ್ಷ ಬಯಸಿದೆ ಎಂದರು.

ನಾನು ಮೊದಲೇ ಹೇಳಿದಂತೆ, ಒಬ್ಬ ಸಾಮಾನ್ಯ ಕಾರ್ಯಕರ್ತ ಭಿನ್ನಾಭಿಪ್ರಾಯ ಹೊಂದಿದ್ದರೂ, ಅದನ್ನು ಕೇಳಬೇಕು. ಅದು ಕಾಂಗ್ರೆಸ್ ಪಕ್ಷ. ನಾವು ನಿರ್ಧಾರಗಳಿಗೆ ಬೆಲೆ ಕೊಡುತ್ತೇವೆ. ಎಲ್ಲರ ಮಾತನ್ನು ಕೇಳಿ ನಂತರ ನಿರ್ಧರಿಸುತ್ತೇವೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶನಿವಾರ ತಡರಾತ್ರಿ ಎಲ್ಲರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕರ್ನಾಟಕ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಶಿಫಾರಸು ಕಳುಹಿಸಲಾಗುವುದು. ಸಂಜೆ ಅಥವಾ ನಾಳೆಯೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುರ್ಜೇವಾಲಾ ಹೇಳಿದ್ದಾರೆ.

ಈ ಮಧ್ಯೆ ಅಭ್ಯರ್ಥಿಗಳ ಘೋಷಣೆ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ಥಳೀಯ ನಾಯಕರು ಬಗೆಹರಿಸುತ್ತಾರೆ ಎಲ್ಲದಕ್ಕೂ ಪ್ರತಿಕ್ರಿಯಿಸಲಾರೆ ಎಂದರು.

ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಕೊಡಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ನಾಯಕರು ಬಿಗಿಪಟ್ಟು ಹಿಡಿದಿದ್ದಾರೆ. ಈ ಬಿಗಿಪಟ್ಟಿನ ನಡುವೆ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ಕೊಡಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಬಾಗಲಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಲಾಗಿದ್ದು, ಎಚ್.ವೈ. ಮೇಟಿ ಅವರ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು